ADVERTISEMENT

‘ಪರಿಸರ ರಕ್ಷಣೆ ಎಲ್ಲರ ಕರ್ತವ್ಯ’

ಯಲಬುರ್ಗಾ: ವಿಶ್ವ ಪರಿಸರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 11:32 IST
Last Updated 9 ಜೂನ್ 2018, 11:32 IST

ಯಲಬುರ್ಗಾ: ಬಸವಲಿಂಗೇಶ್ವರ ಪ್ರೌಢಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗುರುವಾರ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಲಾಯಿತು.  ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಶ್ರೀಧರಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಮುಂದಿನ ಪೀಳಿಗೆಯ ನೆಮ್ಮದಿಯ ಜೀವನಕ್ಕೆ ಹಾಗೂ ಅವರ ಬದುಕು ಕಟ್ಟಿಕೊಳ್ಳುವುದಕ್ಕಾದರೂ ಪರಿಸರ ರಕ್ಷಣಗೆ ಮುಂದಾಗಬೇಕಾಗಿದೆ. ಬರೀ ಪ್ರಚಾರಕ್ಕೆ ಸೀಮಿತವಾಗದೇ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ. ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಿ ಹೆಮ್ಮರವಾಗುವಂತೆ ನೋಡಿಕೊಳ್ಳುವ ಮೂಲಕ ನಮ್ಮ ಜವಾಬ್ದಾರಿ ಪ್ರದರ್ಶಿಸಬೇಕಿದೆ’ ಎಂದು ಹೇಳಿದರು.

‘ಅರಣ್ಯ ಪ್ರದೇಶದ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವ ಕಾರಣ ಮಾನವಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ ನಡೆದಿದೆ. ನಗರೀಕರಣದಿಂದ ಕೃಷಿ ಹಾಗೂ ಅರಣ್ಯ ಭೂಮಿ ಮಾಯವಾಗಿ ಕಾಂಕ್ರೀಟ್ ಕಾಡಾಗುತ್ತಿದೆ.ಮನುಷ್ಯನ ಅಸ್ತಿತ್ವಕ್ಕೆ ಧಕ್ಕೆಯಾಗುವಂತಹ ಸನ್ನಿವೇಶ ನಿರ್ಮಾಣವಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದರು.

ADVERTISEMENT

ಅರಣ್ಯ ಇಲಾಖೆಯ ಸಿಬ್ಬಂದಿ ಶರೀಫ್ ಕೊತ್ವಾಲ್ ಮಾತನಾಡಿ, ಕಾಡು ರಕ್ಷಣೆ ಅರಣ್ಯ ಇಲಾಖೆಯಯೊಂದರದ್ದೇ ಜವಾಬ್ದಾರಿಯಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು’ ಎಂದರು.

ಇಟಗಿ ಭೂ ಕೈಲಾಸ ಮೇಲುಗದ್ದಿಗೆ ಮಠದ ಶ್ರೀ ಶೀವಶಾಂತವೀರ ಮಹಾಸ್ವಾಮೀಗಳು, ಮುಖ್ಯಶಿಕ್ಷಕರಾದ ಶರಣಪ್ಪಗೌಡ ಪಾಟೀಲ, ಬಸಲಿಂಗಪ್ಪ ಕೂತ್ತಲ್, ಶ್ಯಾಮಿದಸಾಬ ಎಲಿಗಾರ್‍ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.