ಕೊಪ್ಪಳ: ಬರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ 1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಈ ಹಣವನ್ನು ಕುಡಿಯುವ ನೀರು ಮತ್ತು ಜಾನುವಾರುಗಳ ಸಂರಕ್ಷಣೆಗಾಗಿ ಮಾತ್ರ ಬಳಸುವಂತೆ ಅನುದಾನ ಬಿಡುಗಡೆ ಮಾಡಿರುವ ಕಂದಾಯ ಇಲಾಖೆ ಆದೇಶದಲ್ಲಿ ಸೂಚಿಸಿದೆ.
ಮುಂದಿನ ಎರಡು ತಿಂಗಳು ಕಾಲ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಹಾಗೂ ಉದ್ಯೋಗ ನೀಡುತ್ತಿಲ್ಲ ಎಂಬ ದೂರುಗಳು ಬಾರದಂತೆ ಕ್ರಮ ಕೈಗೊಳ್ಳಬೇಕು. ಪ್ರತಿ ಹೋಬಳಿಗೆ ಒಬ್ಬ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಬರ ಪರಿಹಾರ ಕಾಮಗಾರಿಗಳು, ಜಾನುವಾರು ಸಂರಕ್ಷಣೆ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಲಾಗುತ್ತಿರುವ ಕಾಮಗಾರಿಗಳನ್ನು ಈ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.