ADVERTISEMENT

ಮತ ಚಲಾಯಿಸಲು ಹಲವು ದಾಖಲೆಪತ್ರ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 10:14 IST
Last Updated 24 ಏಪ್ರಿಲ್ 2013, 10:14 IST

ಕೊಪ್ಪಳ: ವಿಧಾನಸಭಾ ಚುನಾವಣೆಯಲ್ಲಿ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಇಲ್ಲದೇ ಇರುವವರು, ಚುನಾವಣಾ ಆಯೋಗ ಸೂಚಿಸಿರುವ 23 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಇದ್ದರೆ ಮತ ಚಲಾಯಿಸಬಹುದಾಗಿದೆ.

ಮೇ 5ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನದ ಅವಧಿ ನಿಗದಿಪಡಿಸಲಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಡ್ಡಾಯವಾಗಿ ಇರಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊಂದಿರಬೇಕು ಅಥವಾ ಈ ಬಾರಿ ಬೂತ್ ಮಟ್ಟದ ಅಧಿಕಾರಿಗಳು ನೀಡುವ ಮತದಾರರ ಗುರುತಿನ ಚೀಟಿ ಹೊಂದಿದ್ದಲ್ಲಿ ಮತ ಚಲಾಯಿಸಬಹುದು. ಮೇಲಿನ ಎರಡೂ ದಾಖಲೆಗಳು ಇಲ್ಲದೇ ಇರುವವರಿಗೂ ಮತ ಚಲಾಯಿಸಲು ಚುನಾವಣಾ ಆಯೋಗ ಪರ್ಯಾಯವಾಗಿ 23 ಬಗೆಯ ದಾಖಲೆಗಳನ್ನು ನಿಗದಿಪಡಿಸಿದೆ.

ಅವು ಹೀಗಿವೆ: ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ವಾಹನ ಚಾಲನ ಪರವಾನಗಿ ಪತ್ರ, ಪಾನ್ ಕಾರ್ಡ್, ನೌಕರರ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ, ಕಿಸಾನ್ ಕಾರ್ಡ್, ವಿದ್ಯಾರ್ಥಿಗಳಿಗೆ ಕಾಲೇಜುಗಳು ನೀಡುವ ಗುರುತಿನ ಚೀಟಿ, ಭಾವಚಿತ್ರವಿರುವ ಜಮೀನಿನ ಪಟ್ಟಾ, ನೋಂದಣಿಯಾದ ಡೀಡ್, ಭಾವಚಿತ್ರವಿರುವ ಪಡಿತರ ಚೀಟಿ, ಭಾವಚಿತ್ರವಿರುವ ಜಾತಿ ಪ್ರಮಾಣಪತ್ರ, ಮಾಜಿ ಸೈನಿಕರ, ವಯೋವೃದ್ಧ, ವಿಧವಾ ಪಿಂಚಣಿ ಪುಸ್ತಕ, ಸ್ವಾತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ, ಶಸ್ತ್ರ ಪರವಾನಿಗೆ ಪತ್ರ, ಮಾಜಿ ಸೈನಿಕರ ಸಿಎಸ್‌ಡಿ ಕ್ಯಾಂಟೀನ್ ಕಾರ್ಡ್, ಅಂಗವಿಕಲರ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಮಂಜೂರಾತಿ ಪತ್ರ, ಉದ್ಯೋಗ ಖಾತರಿ ಗುರುತಿನ ಚೀಟಿ, ಯಶಸ್ವಿನಿ ಕಾರ್ಡ್, ನಗರ ಅಥವಾ ಸ್ಥಳೀಯ ಸಂಸ್ಥೆಗಳ ನೌಕರರಿಗೆ ನೀಡಿರುವ ಗುರುತಿನ ಚೀಟಿ, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮಾ ಪ್ರಮಾಣ ಪತ್ರ, ಆರ್‌ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಆಧಾರ ಕಾರ್ಡ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT