ಹನುಮಸಾಗರ: ಇಲ್ಲಿನ ವಿಶ್ವಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ನಿಮಿತ್ತವಾಗಿ ಗುರುವಾರ ಸ್ವಾಮಿ ವಿವೇಕಾನಂದರ ಜೀವನ, ತತ್ವದರ್ಶನದ ಭಾವಚಿತ್ರ ಮತ್ತು ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರಾಜೇಂದ್ರ ಪಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಹೊಂದಿ ಅಭಿವೃದ್ಧಿ ಪಥದತ್ತ ಸಾಗಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಚಂದಪ್ಪ ಹಕ್ಕಿ ಮಾತನಾಡಿ, ಶೈಕ್ಷಣಿಕ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಅಬ್ದುಲ್‌ಕರೀಮ ವಂಟೆಳಿ, ಕಸಾಪ ಮಾಜಿ ಅಧ್ಯಕ್ಷ ಶ್ರೀನಿವಾಸ ಜಹಗೀರದಾರ, ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತಧಿಕಾರಿ ವೀರೇಶ ವಿಶ್ವಕರ್ಮ ಮಾತನಾಡಿದರು. ಕುರುಬಗೇರಾ ಶಾಲೆಯ ಮುಖ್ಯ ಶಿಕ್ಷಕ ಸದಾನಂದಯ್ಯ ಹಿರೇಮಠ, ಶಾಲೆಯ ಶಿಕ್ಷಕ ಸಿಬ್ಬಂದಿ ಇದ್ದರು.
ಮೈಲಾರಪ್ಪ ವಣಿಗೇರಿ ಸ್ವಾಗತಿಸಿದರು. ಬಸವರಾಜ ಕಮತರ ನಿರೂಪಿಸಿದರು. ಲಕ್ಷ್ಮಿ ಕೊಳ್ಳಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.