ADVERTISEMENT

‘ಹಗರಣ ಮುಕ್ತ ಆಡಳಿತ’

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 8:25 IST
Last Updated 27 ಡಿಸೆಂಬರ್ 2017, 8:25 IST

ಕನಕಗಿರಿ: ’ದೇಶದ ಪ್ರಗತಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನೀಡಿದ ಕೊಡುಗೆ ಅಪಾರ’ ಎಂದು ನಗರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮಹಾಂತೇಶ ಸಜ್ಜನ್ ತಿಳಿಸಿದರು.

ನವಲಿ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ವಾಜಪೇಯಿ ಅವರ 93ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜಕೀಯ ಅಜಾತ ಶತ್ರು ಎನ್ನಿಸಿಕೊಂಡಿದ್ದ ವಾಜಪೇಯಿ ವಿವಿಧ ರಂಗಗಳಲ್ಲಿ ಅಪಾರವಾದ ಸೇವೆ ಸಲ್ಲಿಸಿದ ಪರಿಣಾಮ ವಾಜಪೇಯಿ ಅವರಿಗೆ ‘ಭಾರತ್ನ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ ಹಾದಿಮನಿ ಮಾತನಾಡಿ,‘ವಾಜಪೇಯಿ ಅವರು ತಮ್ಮ ಅಧಿಕಾರದವಧಿಯಲ್ಲಿ ಯಾವುದೇ ಕಪ್ಪುಚುಕ್ಕೆ ಬಾರದಂತೆ ಭ್ರಷ್ಟಾಚಾರ ರಹಿತ, ಹಗರಣ ಮುಕ್ತ ಆಡಳಿತ ನಡೆಸಿದರು’ ಎಂದು ಅವರು ಬಣ್ಣಿಸಿದರು.

ಎಸ್‌.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಸಣ್ಣ ಕನಕಪ್ಪ, ಎಪಿಎಂಸಿ ಮಾಜಿ ನಿರ್ದೇಶಕ ವಾಗೇಶ ಹಿರೇಮಠ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವಕುಮಾರ ಕೋರಿ, ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ಶರಣಪ್ಪ ಭಾವಿಕಟ್ಟಿ, ಕಲ್ಲಿನಾಥ ಅಕ್ಕನವರ, ರಮೇಶ ಮರಾಠಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.