ADVERTISEMENT

3ರಿಂದ ಮತದಾರರ ಜಾಗೃತಿ

`ಸ್ವೀಪ್'ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷ ಡಿ.ಕೆ.ರವಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 10:31 IST
Last Updated 1 ಏಪ್ರಿಲ್ 2013, 10:31 IST
`ಸ್ವೀಪ್' ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ಚರ್ಚಿಸಲು ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಅಧ್ಯಕ್ಷ ಡಿ.ಕೆ.ರವಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ  ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಚಿತ್ರದಲ್ಲಿದ್ದಾರೆ
`ಸ್ವೀಪ್' ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ಚರ್ಚಿಸಲು ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಅಧ್ಯಕ್ಷ ಡಿ.ಕೆ.ರವಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಚಿತ್ರದಲ್ಲಿದ್ದಾರೆ   

ಕೊಪ್ಪಳ: ಮತದಾರರ ನೋಂದಣಿ ಹಾಗೂ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ `ಸ್ವೀಪ್' ಕಾರ್ಯಕ್ರಮವನ್ನು ಆಂದೋಲನ ಮಾದರಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏ. 3ರಿಂದ ಜಿಲ್ಲೆಯಲ್ಲಿ ಮತದಾರರ ಜಾಗೃತಿ ಅಭಿಯಾನ ಪ್ರಾರಂಭಿಸಲಾಗುವುದು ಎಂದು `ಸ್ವೀಪ್' ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಹೇಳಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ `ಸ್ವೀಪ್' ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏ. 3ರಂದು ನಗರದ ಸಾರ್ವಜನಿಕ ಮೈದಾನದಲ್ಲಿ, 4ರಂದು ಕುಷ್ಟಗಿಯ ಬುತ್ತಿ ಬಸವೇಶ್ವರ ದೇವಸ್ಥಾನ ಆವರಣ, 5ರಂದು ಯಲಬುರ್ಗಾದ ಸರ್ಕಾರಿ ಪದವಿಪೂರ್ವ ಕಾಲೇಜು (ಬಿಇಓ ಕಚೇರಿ ಆವರಣ) ಮೈದಾನ, 6ರಂದು ಗಂಗಾವತಿಯಲ್ಲಿ ಬಸ್ ನಿಲ್ದಾಣದ ಎದುರುಗಡೆ ಇರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಏ. 3ರಂದು ನಗರದಲ್ಲಿ ಬೆಳಿಗ್ಗೆ 8.30 ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ನಡೆಯುವ ಜಾಗೃತಿ ಅಭಿಯಾನದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಪಾಲ್ಗೊಳ್ಳುವರು. ನಗರದ ಎಲ್ಲ ಸರ್ಕಾರಿ, ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸದೇ ಇರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲು ಇದೇ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಕೇಂದ್ರಗಳಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮದ ಸಂಘಟನೆ ಹೊಣೆಯನ್ನು ಆಯಾ ತಾಲ್ಲೂಕು ಎನ್‌ಎಸ್‌ಎಸ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.