ADVERTISEMENT

45 ಕೂಲಿಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2019, 18:10 IST
Last Updated 23 ಮಾರ್ಚ್ 2019, 18:10 IST

ಕೊಪ್ಪಳ: ತಾಲ್ಲೂಕಿನ ಗಿಣಿಗೇರಾ ಗ್ರಾಮದ ಇಟ್ಟಿಗೆ ಭಟ್ಟಿ ಮೇಲೆ ಶುಕ್ರವಾರ ರಾತ್ರಿ ಜಿಲ್ಲಾಡಳಿತ ಮತ್ತು ಪೊಲೀಸರು ದಾಳಿ ನಡೆಸಿ ಒಡಿಶಾ ರಾಜ್ಯದ 45 ಕೂಲಿಕಾರ್ಮಿಕರನ್ನು ರಕ್ಷಿಸಿದ್ದಾರೆ.

ಒತ್ತೆಯಾಳುಗಳಾಗಿ ಇರಿಸಿಕೊಂಡು ದುಡಿಸಿಕೊಳ್ಳುತ್ತಿದ್ದ ಮಾಲೀಕ ರಮೇಶ ಯಲ್ಲೂರ ಅವರನ್ನು ಬಂಧಿಸಿದ್ದಾರೆ.

ಕಡಿಮೆ ಕೂಲಿಗೆ ಒಡಿಶಾದಿಂದ ಕಾರ್ಮಿಕರನ್ನು ಕರೆ ತಂದು ಅವರಿಂದ ಹಗಲು-ರಾತ್ರಿ ದುಡಿಸಿಕೊಳ್ಳಲಾಗುತಿತ್ತು. ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗುತಿತ್ತು ಎನ್ನಲಾಗಿದೆ.ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ತಪ್ಪಿಸಿಕೊಂಡು ಒಡಿಶಾಗೆ ತೆರಳಿ ಅಲ್ಲಿಯ ಮಾನವಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಈ ಕುರಿತು ಅಲ್ಲಿನ 'ಇಂಟರ್ ನ್ಯಾಷನಲ್ ಜಸ್ಟಿಸ್' ಸಂಘಟನೆ ಸದಸ್ಯರು ಇಲ್ಲಿನ ಜಿಲ್ಲಾಡಳಿಕ್ಕೆ ಮಾಹಿತಿ ನೀಡಿದರು. ಅದನ್ನು ಆಧರಿಸಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿತು.

ADVERTISEMENT

'ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕಾರ್ಮಿಕರ ಸುರಕ್ಷತೆ ಬಗ್ಗೆ ಒಡಿಶಾ ರಾಜ್ಯದ ಬೋಲಂಗೀರ್ ಜಿಲ್ಲಾಧಿಕಾರಿಗೆ ಮಾಹಿತಿ ನೀಡಲಾಗುವುದು' ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.