ADVERTISEMENT

4.8 ಕೋಟಿ ವೆಚ್ಚದ ಚರಂಡಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2011, 5:30 IST
Last Updated 9 ಜೂನ್ 2011, 5:30 IST

ಕೊಪ್ಪಳ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 63ರ ರಸ್ತೆ ವಿಸ್ತರಣೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ 4.8 ಕೋಟಿ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಿಸುವ ಕಾಮಗಾರಿಗೆ ಈಚೆಗೆ ಬಸವೇಶ್ವರ ವೃತ್ತದ ಬಳಿ ಸಂಸದ ಶಿವರಾಮಗೌಡ ಈಚೆಗೆ ಚಾಲನೆ ನೀಡಿದರು.

ನಗರ ವಾಸಿಗಳ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರೀಯ ಹೆದ್ದಾರಿ 63ರ ವಿಸ್ತರಣೆ ಈಗಾಗಲೇ ಪೂರ್ಣಗೊಂಡಿದ್ದು, ರಸ್ತೆ ಅಭಿವೃದ್ಧಿ ಕಾರ್ಯ ಪ್ರಾರಂಭವಾಗಬೇಕಾಗಿದೆ. ಇದಕ್ಕೂ ಮುನ್ನ ರಸ್ತೆಯ
ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಕಾರ್ಯವಾಗಬೇಕಾಗಿದೆ.

 4.82 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಚರಂಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು 3 ತಿಂಗಳ ಕಾಲಮಿತಿಯನ್ನು ಯೋಜನೆಯ ಹೊಣೆ ಹೊತ್ತಿರುವ ನಿರ್ಮಿತಿ ಕೇಂದ್ರಕ್ಕೆ  ಹಾಕಿಕೊಡಲಾಗಿದೆ. 

ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.