ADVERTISEMENT

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ: ಸಚಿವ ಬಸವರಾಜ ರಾಯರಡ್ಡಿ ಭರವಸೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 12:18 IST
Last Updated 26 ಜನವರಿ 2018, 12:18 IST

ಕೊಪ್ಪಳ: ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಮೇರೆಗೆ ಉಪನ್ಯಾಸಕರ ಬೇಡಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ನಗರಲ್ಲಿ ಬುಧವಾರ ಅತಿಥಿ ಉಪನ್ಯಾಸಕರ ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ವೀರಣ್ಣ ಸಜ್ಜನರ್‍, ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರ, ಅತಿಥಿ ಉಪನ್ಯಾಸಕರಾದ ಕಲ್ಲೇಶ್ವರ ಅಬ್ಬಿಗೇರಿ, ಮಹೇಶ್‍ ಪೂಜಾರ, ಗೀತಾ ಬೆಲ್ಲದ್, ಸಂತೋಷ ಬೆಲ್ಲದ್‍, ಬಸವರಾಜ್‍, ಪ್ರಕಾಶ್‍ ಬಳ್ಳಾರಿ, ಖಾಜಾಹುಸೇನ್‍, ಕವಿತಾ ಹಿರೇಮಠ, ಬಸವರಾಜ್‍ ಹುಳಕಣ್ಣನವರ್‍ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT