ADVERTISEMENT

ಕ್ರೀಡಾಶಾಲೆ ತೆರೆಯಲು ಚಿಂತನೆ: ರಾಯರಡ್ಡಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 8:36 IST
Last Updated 20 ಫೆಬ್ರುವರಿ 2018, 8:36 IST

ಯಲಬುರ್ಗಾ: ತಾಲ್ಲೂಕಿನ ಕ್ರೀಡಾಪಟುಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವುದಕ್ಕೆ ಪೂರಕ ವಾತಾವಣ ನಿರ್ಮಾಣ ಮಾಡುವ ಉದ್ದೇಶದಿಂದ ತಾಲ್ಲೂಕಿನಲ್ಲಿ ಕ್ರೀಡಾಶಾಲೆ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಯುವ ಸಬಲೀಕರಣ ಯುವ ಜನ ಕ್ರೀಡಾ ಇಲಾಖೆ, ಜಿಲ್ಲಾ ಯುವ ಸಂಘಗಳ  ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ಚೈತನ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಹ್ವಾನಿಸಿ ಸೂಕ್ತ ತರಬೇತಿ ಕೊಡುವ ಉದ್ದೇಶ ಹೊಂದಲಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾನೂನುಬದ್ಧವಾಗಿ ರಚನೆಗೊಂಡ ರಾಯಲ್ ಕ್ಲಬ್ ಮೂಲಕ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇದರಲ್ಲಿ ಯಾವುದೇ ಲೋಪವಿಲ್ಲ, ಲ್ಯಾಪ್‌ಟಾಪ್‌ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಟೀಕೆ ಮಾಡುವವರ  ಮಾಡಲಿ, ಅಭಿವೃದ್ಧಿ ಕಡೆ ಮಾತ್ರ ನನ್ನ ಗಮನ, ತಾಲ್ಲೂಕಿನಲ್ಲಿ ಆಗಬೇಕಾದ ಎಲ್ಲ ಅಭಿವೃದ್ಧಿ ಕಾರ್ಯಗಳು ಮುಗಿದಿವೆ. ಉಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ಹೇಳಿದರು.

ADVERTISEMENT

ಕೆಪಿಸಿಸಿ ಸದಸ್ಯ ಬಸವರಾಜ ಉಳ್ಳಾಗಡ್ಡಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಶ್ರೀ ಅರಕೇರಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಗಿರಿಜಾ ಸಂಗಟಿ, ಹೊಳೆಯಮ್ಮ ಪೋಲಿಸ್ ಪಾಟೀಲ್, ಹನಮಂತಗೌಡ ಪಾಟೀಲ್, ಮಂಜಣ್ಣ ಕಡೇಮನಿ, ಈಶಪ್ಪ ಶಿರೂರು, ಯಂಕಣ್ಣ ಯರಾಶಿ, ವೈ.ಸುದರ್ಶನ್ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.