ADVERTISEMENT

ದಿಢೀರನೆ ಕುಸಿದ ಗೋಡೆ; ಸ್ಥಳದಲ್ಲಿಯೇ ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 9:56 IST
Last Updated 5 ಅಕ್ಟೋಬರ್ 2022, 9:56 IST

ಕೊಪ್ಪಳ: ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮೇಲಿಂದ ಮೇಲೆ ಸುರಿದ ಮಳೆಯಿಂದಾಗಿ ಅತಿಯಾಗಿ ತೇವಗೊಂಡಿದ್ದ ಮಣ್ಣಿನ ಮನೆ ಬುಧವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ವೃದ್ಧೆ ಸ್ಥಳದಲ್ಲಿಯೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕೊಪ್ಪಳ ತಾಲ್ಲೂಕಿನ ಮತ್ತೂರಿನಲ್ಲಿ ಘಟನೆ ನಡೆದಿದ್ದು, ಬಸಮ್ಮ ಶಿವನಗೌಡ ಮೇಟಿ (65) ಮೃತಪಟ್ಟವರು. ಬಸಮ್ಮ ಅವರ ಗಂಡ ಶಿವನಗೌಡ ಮತ್ತು ಶಂಕ್ರಮ್ಮ ಎಂಬುವರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

‘ನಿರಂತರವಾಗಿ ಸುರಿದ ಮಳೆಯಿಂದಾಗಿ ಮಣ್ಣಿನ ಮನೆ ತೇವಗೊಂಡಿತ್ತು. ಬುಧವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಮನೆಯೊಳಗೆ ಅಡುಗೆ ಮಾಡುತ್ತಿದ್ದ ಬಸಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ತಿಳಿಸಿದರು. ಅಳವಂಡಿ ಪೊಲೀಸ್ ಠಾಣಾ ವ್ಯಾ‍ಪ್ತಿಯಲ್ಲಿ ಈ ಘಟನೆ ನಡೆದಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.