ADVERTISEMENT

ಪದವಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 11:54 IST
Last Updated 11 ಜನವರಿ 2022, 11:54 IST
ತಾವರಗೇರಾ ಪಟ್ಟಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಂದಾಯ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು
ತಾವರಗೇರಾ ಪಟ್ಟಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಂದಾಯ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು   

ತಾವರಗೇರಾ: ‘ಪಟ್ಟಣದಲ್ಲಿ ಪದವಿ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡುವ ಮೂಲಕ ಅನುಕೂಲ ಮಾಡಿಕೊಡಬೇಕು’ ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಕಂದಾಯ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.

‘ಇಲ್ಲಿನ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿವರ್ಷ ಪರೀಕ್ಷೆ ಬರೆಯಲು 25 ಕಿ.ಮೀ ದೂರದ ಕುಷ್ಟಗಿಗೆ ಹೋಗುತ್ತಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ. ಇಲ್ಲಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಕಳೆದ ಕೆಲ ತಿಂಗಳುಗಳ ಹಿಂದೆಯೂ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಇಲಾಖೆ ಅಧಿಕಾರಿಗಳು ಕೇಂದ್ರ ಸ್ಥಾಪನೆಗೆ ಮುಂದಾಗುತ್ತಿಲ್ಲ’ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ADVERTISEMENT

ಈ ಬಗ್ಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಎಬಿವಿಪಿ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ಕಂದಾಯ ನಿರೀಕ್ಷಕ ಶರಣಪ್ಪ ದಾರ, ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತ ನಾಯಕ ಮತ್ತು ಎಬಿವಿಪಿ ನಗರ ಘಟಕದ ಅಧ್ಯಕ್ಷ ಶಂಭುನಗೌಡ ಪೊಲೀಸ್ ಪಾಟೀಲ, ಉಪಾಧ್ಯಕ್ಷ ಶಿವಕುಮಾರ, ಕಾರ್ಯದರ್ಶಿ ನಾಗರಾಜ ಗುಡದೂರು, ಕಾರ್ಯಾಧ್ಯಕ್ಷ ಸುರೇಶ ಗುಡದೂರು, ಅಮರೇಶ, ಶ್ರೀಧರ, ಎಬಿವಿಪಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.