ADVERTISEMENT

ಭೂದಾಖಲೆ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪ: ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 13:31 IST
Last Updated 16 ಜೂನ್ 2020, 13:31 IST
ಕೊಪ್ಪಳದ ಎನ್‌ಜಿಒ ಕಾಲೊನಿಯ ಗೋಪಾಲಯ್ಯ ಮಾಲಗಿತ್ತಿ ಅವರ ಮನೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿರುವುದು
ಕೊಪ್ಪಳದ ಎನ್‌ಜಿಒ ಕಾಲೊನಿಯ ಗೋಪಾಲಯ್ಯ ಮಾಲಗಿತ್ತಿ ಅವರ ಮನೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿರುವುದು   

ಕೊಪ್ಪಳ: ಭೂ ದಾಖಲೆಗಳ ಉಪನಿರ್ದೇಶಕರೊಬ್ಬರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮಂಗಳವಾರ ಕೊಪ್ಪಳದ ಎನ್‌ಜಿಒ ಕಾಲೊನಿಯ ತಾಲೇಡಾ ಲೇಔಟ್‌ನಲ್ಲಿ ನಡೆದಿದೆ.

ಬಾಲಕೋಟೆಯ ಭೂದಾಖಲೆಗಳ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ನಗರದ ನಿವಾಸಿ ಗೋಪಾಲಯ್ಯ ಮಾಲಗಿತ್ತಿ ಅವರ ಕೊಪ್ಪಳದ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿದರು.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕಚೇರಿಗೆ ದೂರು ಸಲ್ಲಿಸಲಾಗಿತ್ತು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.