ADVERTISEMENT

ಲಾರಿಗೆ ಬಸ್‌ ಡಿಕ್ಕಿ; 12 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 8:53 IST
Last Updated 6 ಜನವರಿ 2023, 8:53 IST
ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್‌ ಲಾರಿಗೆ ಡಿಕ್ಕಿ ಹೊಡೆದಿರುವುದು
ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್‌ ಲಾರಿಗೆ ಡಿಕ್ಕಿ ಹೊಡೆದಿರುವುದು   

ಕುಷ್ಟಗಿ: ರಸ್ತೆ ಬದಿ ನಿಂತ ಲಾರಿಗೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದು 12 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಸಂಜೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಕಲಕೇರಿ ಬಳಿ ನಡೆದಿದೆ.

ಸಣ್ಣ ಪ್ರಮಾಣದ ಮತ್ತು ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸ್‌ ಚಾಲಕನ ವಿರುದ್ಧ ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರಪನಹಳ್ಳಿ ಘಟಕದ ಈ ಬಸ್‌ ಹರಿಹರದಿಂದ ಕುಷ್ಟಗಿ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿತ್ತು. ಗಾಯಗೊಂಡ ಬಹುತೇಕ ಜನರು ಹಿರೇಅರಳಿಹಳ್ಳಿಯ ಕೂಲಿಕಾರ್ಮಿಕರಾಗಿದ್ದು ಆಲಮಟ್ಟಿ ದಾಳಿಂಬೆ ತೋಟದ ಕೆಲಸಕ್ಕೆ ತೆರಳುತ್ತಿದ್ದರು ಎಂದು ತಿಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT