ಪ್ರಾತಿನಿಧಿಕ ಚಿತ್ರ
ತಾವರಗೇರಾ: ಮೇಣೇಧಾಳ-ಬಚನಾಳ ರಸ್ತೆಯಲ್ಲಿ ಬುಧವಾರ ಸಂಜೆ ಕಾರು ಮತ್ತು ದ್ವಿಚಕ್ರ ವಾಹನ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಶಿವರಾಜ ( 23) ಎಂಬ ಯುವಕ ಮೃತ್ತಪಟ್ಟು, 6 ಜನರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಕಾರು ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರ ಮತ್ತು ಗಂಗಾವತಿ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ದಾಖಲು ಮಾಡಲಾಗಿದೆ. ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.