ADVERTISEMENT

ಆ್ಯಸಿಡ್ ದಾಳಿ ಆರೋಪಿಗೆ ಕಠಿಣ ಶಿಕ್ಷೆ- ಸಚಿವ ಹಾಲಪ್ಪ ಆಚಾರ್

​ಪ್ರಜಾವಾಣಿ ವಾರ್ತೆ
Published 1 ಮೇ 2022, 5:13 IST
Last Updated 1 ಮೇ 2022, 5:13 IST
ಹಾಲಪ್ಪ ಆಚಾರ್
ಹಾಲಪ್ಪ ಆಚಾರ್   

ಕೊಪ್ಪಳ: ‘ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಇಂಥವರಿಗೆ ಕಠಿಣ ಶಿಕ್ಷೆಯಾಗುವಂಥ ಕಾಯ್ದೆ ಜಾರಿಯಾಗಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿ,‘ಇಂಥ ಕೃತ್ಯ ನಡೆದಿ ರುವುದು ಬೇಸರದ ಸಂಗತಿ. ಯುವತಿಯ ಕುಟುಂಬಕ್ಕೆ ಸರ್ಕಾರ ದಿಂದ ಅಗತ್ಯ ಪರಿಹಾರ ಒದಗಿಸಲಾಗುವುದು’ ಎಂದರು.

ಹಿರಿಯ ಅಧಿಕಾರಿಗಳನ್ನು ಆಸ್ಪತ್ರೆಗೆ ಕಳುಹಿಸಿ ದ್ದೇನೆ. ನಾನು ಕೂಡ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ಹೇಳುತ್ತೇನೆ. ಇನ್ನೊಮ್ಮೆ ಯಾರೂ ಇಂಥ ಕೃತ್ಯ ಎಸಗದಂತೆ ಆರೋಪಿಗೆ ಶಿಕ್ಷೆಯಾಗಬೇಕು. ಇಂಥ ಮಾನಸಿಕ ಅಸ್ವಸ್ಥರಿಗೆ ಕಠಿಣ ಶಿಕ್ಷೆಯಾಗದಿದ್ದರೆ ಇಂಥ ಪ್ರಕರಣಗಳು ಮರುಕಳಿಸುತ್ತವೆ ಎಂದು ಹೇಳಿದರು.

ADVERTISEMENT

ಯುವತಿಯ ಕುಟುಂಬಕ್ಕೆ ವೈಯಕ್ತಿಕವಾಗಿ ನಾನು ₹1 ಲಕ್ಷ ಪರಿಹಾರ ನೀಡಿದ್ದೇನೆ. ಸರ್ಕಾರದಿಂದ ಎಲ್ಲ ಸಹಕಾರ ಒದಗಿಸುತ್ತೇವೆ ಎಂದರು.

ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಅವರು,‘ಸಿಎಂ ಈಗಾಗಲೇ ಸೂಕ್ತ ತನಿಖೆ ಮಾಡಿ ಶಿಕ್ಷಿಸುವುದಾಗಿ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಸ್ವತಃ ತಾವೇ ತಮ್ಮ ಬಳಿ ದಾಖಲೆ ಇದೆ ಎಂದಿದ್ದರು. ಅಲ್ಲದೆ ಮಾಧ್ಯಮಗಳ ಮುಂದೆ ಬಂದು ಹೇಳಿದ್ದರು. ದಾಖಲೆಗಳಿದ್ದರೆ ತನಿಖಾಧಿಕಾರಿಗಳಿಗೆ ನೀಡಲು ಇವರಿಗೇನು ಕಷ್ಟ ಮಾಧ್ಯಮಗಳ ಮುಂದೆ ಹೇಳಿ ಕೇವಲ ಪೇಪರ್ ಸಿಂಹ ಆಗಬಾರದು’ ಎಂದು ಟೀಕಿಸಿದರು. ತನಿಖಾಧಿಕಾರಿಗಳಿಗೆ ಮಾಹಿತಿ ನೀಡುವುದನ್ನು ಬಿಟ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಪ್ರಬುದ್ಧವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.