ಕೊಪ್ಪಳ: ‘ಎಸ್‌ಡಿಪಿಐ ಮಾತ್ರವಲ್ಲ, ಜಿಲ್ಲೆಯಲ್ಲಿ ಶಾಂತಿ ಕದಡುವ ಎಲ್ಲ ಸಂಘಟನೆಗಳ ವಿರುದ್ಧವೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ತುಂಗಭದ್ರಾ ಜಲಾಶಯಕ್ಕೆ ಇನ್ನೊಂದು ಸುರಕ್ಷತಾ ಗೇಟ್ ನಿರ್ಮಾಣದ ಬಗ್ಗೆ ತೆಲಂಗಾಣ ಹಾಗೂ ಆಂಧ್ರ ರಾಜ್ಯಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಜಲಾಶಯಕ್ಕೆ ಹರಿದುಬರುವ ಹೂಳು ತಡೆಗೆ ನದಿಗೆ ಅಡ್ಡಲಾಗಿ ನಾಲ್ಕು ಕಡೆಗಳಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದರು.
‘ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಆಸೆಯನ್ನು ಯಾರು ಬೇಕಾದರೂ ವ್ಯಕ್ತಪಡಿಸಬಹುದು. ಆದರೆ ಆ ಕುರ್ಚಿ ಖಾಲಿಯಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.