ಕೊಪ್ಪಳ: ‘ಯುವಕರು ಸರ್ಕಾರದ ಸ್ವಯಂ ಉದ್ಯೋಗದ ಯೋಜನೆಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು’ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ತಾಲ್ಲೂಕಿನ ಬಸಾಪುರ ಗ್ರಾಮದ ಹತ್ತಿರ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕಿರು ಆಹಾರ ಉದ್ದಿಮೆಗಳ ಔಪಾಚಾರೀಕರಣ ಯೋಜನೆಯಡಿ ಸ್ಥಾಪಿತವಾದ ಡಿ.ಬಿ ಮಶ್ರೂಮ್ ಅವರ ಭೀಮಾ ನ್ಯಾಚುರಲ್ಸ್ ಅಣಬೆ ಕೃಷಿ ಘಟಕ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಮಾತನಾಡಿ, ‘ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿಕೊಂಡ 178ಕ್ಕೂ ಹೆಚ್ಚು ಜನ ಫಲಾನುಭವಿಗಳಿದ್ದು, ಸ್ವಯಂ ಉದ್ಯೋಗ ಕಂಡುಕೊಂಡಿದ್ದಾರೆ. ಈ ಯೋಜನೆಯು ತರಬೇತಿ, ಬ್ಯಾಂಕ್ ಸಾಲ, ಯೋಜನಾ ವೆಚ್ಚದ ಶೇ 50ರಷ್ಟು ಅಥವಾ ಗರಿಷ್ಠ ₹15 ಲಕ್ಷಗಳ ವರೆಗೆ ಸಹಾಯಧನ ನೀಡಲಾಗುತ್ತದೆ’ ಎಂದು ತಿಳಿಸಿದರು.
ಅಣಬೆ ಕೃಷಿ ಮತ್ತು ಉತ್ಪನ್ನಗಳ ಘಟಕ ಸ್ಥಾಪಿಸಿದ ಭೀಮಪ್ಪ ಶಿವಪ್ಪ ಕೋರವರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಶೇಖರ್ ಪಾಟೀಲ, ಅಯೋಧ್ಯಾ ಕ್ರಾಪ್ಸ್ ಅಕಾಡೆಮಿ ಸಂಸ್ಥಾಪಕ ಎಂ.ಬಿ.ಪಾಟೀಲ, ಕೃಷಿ ಇಲಾಖೆಯ ಜಿಲ್ಲಾ ಅನುಷ್ಠಾನ ಸಮಿತಿಯ ನಳಿನಿ, ಆತ್ಮ ಯೋಜನೆಯ ಶಿವಪ್ಪ ನಾಯಕ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಗೊಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.