ADVERTISEMENT

ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿ: ರೈತರಿಗೆ ನಿರ್ಮಲಾ ಸೀತಾರಾಮನ್ ಸಲಹೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 11:39 IST
Last Updated 15 ಅಕ್ಟೋಬರ್ 2025, 11:39 IST
<div class="paragraphs"><p>ಕೊಪ್ಪಳದ&nbsp;ಮೆತಗಲ್‌ನ ಕೃಷಿ ಸಂಸ್ಕರಣಾ ತರಬೇತಿ ಘಟಕ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್</p></div>

ಕೊಪ್ಪಳದ ಮೆತಗಲ್‌ನ ಕೃಷಿ ಸಂಸ್ಕರಣಾ ತರಬೇತಿ ಘಟಕ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

   

ಕೊಪ್ಪಳ: ‘ರೈತರು ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಮತ್ತು ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದರು.

ತಾಲ್ಲೂಕಿನ ಮೆತಗಲ್‌ನಲ್ಲಿ ನಿರ್ಮಲಾ ಸೀತರಾಮನ್‌ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಬಾರ್ಡ್‌ ಮೂಲಕ ನಿರ್ಮಿಸಲಾದ ಕೃಷಿ ಸಂಸ್ಕರಣಾ ತರಬೇತಿ ಘಟಕ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ‘ವೋಕಲ್‌ ಫಾರ್‌ ಲೋಕಲ್’ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದ್ದು, ಅದರಂತೆ ಹಣ್ಣುಗಳ ಸಂಸ್ಕರಣೆಗಳ ಮೂಲಕ ಅವುಗಳ ಮೌಲ್ಯವರ್ಧನೆ ಮಾಡಿ ಬೆಲೆ ಹೆಚ್ಚಿಸಿಕೊಳ್ಳುವ ಕೌಶಲವನ್ನು ರೈತರು ರೂಢಿಸಿಕೊಳ್ಳಬೇಕು’ ಎಂದರು.

ADVERTISEMENT

ಕಿರು ಉದ್ಯಮಗಳ ಮೂಲಕ ಪ್ರಗತಿ ಕಾಣುತ್ತಿರುವ ಕೊಪ್ಪಳ ಜಿಲ್ಲೆ ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ’ಅಕ್ಷಯಪ‍ಪಾತ್ರೆ’ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಇತ್ತೀಚೆಗೆ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ (ಜಿಎಸ್‌ಟಿ) ಕಡಿಮೆ ಮಾಡಿರುವುದು ಕೂಡ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಕಾರಣವಾಗಲಿದೆ ಎಂದು ಹೇಳಿದರು.  

‘ಕೇಂದ್ರ ಸರ್ಕಾರ ಹಿಂದಿನ ಐದು ವರ್ಷಗಳಲ್ಲಿ ರೈತರ ಅನುಕೂಲಕ್ಕಾಗಿ ವಿವಿಧ ರಾಜ್ಯಗಳಿಗೆ ₹3,700 ಕೋಟಿಗೂ ಹೆಚ್ಚು ಹಣ ನೀಡಿದೆ. ₹11 ಸಾವಿರ ಕೋಟಿ ಸೌಲ ಸೌಲಭ್ಯ ಒದಗಿಸಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತರು ಉದ್ಯಮಿಗಳಾಗಿ ಹೊರಹೊಮ್ಮಿದ್ದಾರೆ. ಧನ್ ಧಾನ್ಯ ಕೃಷಿ ಯೋಜನೆಗಾಗಿ 2025-26ರ ಬಜೆಟ್‌ನಲ್ಲಿ ₹24 ಸಾವಿರ ಕೋಟಿ ಹಂಚಿಕೆ ಮಾಡಿ ಇದಕ್ಕೆ ದೇಶದ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೊಪ್ಪಳ ಜಿಲ್ಲೆಯೂ ಒಂದಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.