ADVERTISEMENT

ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಗೆ ಕೊಪ್ಪಳದ ಅಖಿಲಾ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 16:38 IST
Last Updated 1 ಅಕ್ಟೋಬರ್ 2022, 16:38 IST
ಅಖಿಲಾ ಎಚ್‌.
ಅಖಿಲಾ ಎಚ್‌.   

ಕೊಪ್ಪಳ: ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ನೆಹರು ಯುವ ಸಂಘಟನ ವತಿಯಿಂದ ಆಯೋಜಿಸಲಾಗಿರುವ ರಾಷ್ಟ್ರೀಯ ಮಟ್ಟದ ಭಾಷಣ ಸ್ಪಧೆ೯ಯಲ್ಲಿ ಪಾಲ್ಗೊಳ್ಳಲು ಇಲ್ಲಿನ ಗವಿಸಿದ್ದೇಶ್ವರ ಆಯುವೇ೯ದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಎನ್‌ಎಸ್‌ಎಸ್‌ ಘಟಕದ ವಿದ್ಯಾರ್ಥಿನಿ ಅಖಿಲಾ ಎಚ್‌. ಆಯ್ಕೆಯಾಗಿದ್ದಾರೆ.

ಭಾನುವಾರ ನವದೆಹಲಿಯ ಸಂಸತ್‌ ಭವನದಲ್ಲಿ ನಡೆಯುವ ರಾಷ್ಟ್ರೀಯ ನಾಯಕರ ಜನ್ಮ ಸ್ಮರಣೋತ್ಸವ, ಮಹಾತ್ಮ ಗಾಂಧೀಜಿ, ಹಾಗೂ ಲಾಲ್‌ ಬಹದ್ದೂರು ಶಾಸ್ತ್ರಿ ಜಯಂತಿಯ ರಾಜ್ಯದ ಎನ್‌ಎಸ್‌ಎಸ್‌ ಘಟಕದ ಪ್ರತಿನಿಧಿಯಾಗಿ ಪಾಲ್ಗೊಳ್ಳಲಿದ್ದಾರೆ. ‘ನನ್ನ ಮೇಲೆ ಪ್ರಭಾವ ಬೀರಿದ ರಾಷ್ಟ್ರೀಯ ಸ್ವಾತಂತ್ರ್ಯ ನಾಯಕರು’ ವಿಷಯದ ಕುರಿತು ಮಾತನಾಡಲಿದ್ದಾರೆ.

ವಿದ್ಯಾರ್ಥಿನಿ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎಸ್. ಸವಡಿ, ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಎಸ್‌.ಎಸ್‌. ಶಿರೂರಮಠ, ಡಾ. ರುದ್ರಾಕ್ಷಿ. ದೇವರಗುಡಿ ಹರ್ಷ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.