ADVERTISEMENT

ಕೊಪ್ಪಳ | ದಲಿತರ ಹಣ ದುರ್ಬಳಕೆ ಆರೋಪ; ಬಿಜೆಪಿ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 7:54 IST
Last Updated 1 ಮಾರ್ಚ್ 2025, 7:54 IST
<div class="paragraphs"><p>ಪ್ರತಿಭಟನೆ ನಡೆಸಿದ&nbsp;ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು</p></div>

ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು

   

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು‌.

ಬಸವೇಶ್ವರ ವೃತ್ತದಿಂದ ಜಿಲ್ಲಾಡಳಿತ ಭವನದ ತನಕ ಪಾದಯಾತ್ರೆ ಮೂಲಕ ಬಂದ ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಘೋಷಣೆ ಕೂಗಿದರು.

ADVERTISEMENT

ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಕ್ಕೆ ಮೀಸಲಿಟ್ಟ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿ ಅನ್ಯಾಯ ಮಾಡಿದೆ. ಇದು ಜನ ವಿರೋಧಿ ಸರ್ಕಾರವಾಗಿದೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟರು ಸೇರಿದಂತೆ ಎಲ್ಲರ ಹಣ ನುಂಗಿದೆ. ಸರ್ಕಾರದಿಂದ ಜನರಿಗೆ ಭ್ರಮ ನಿರಸನವಾಗಿದೆ ಎಂದರು.

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ದೊಡ್ಡನಗೌಡ ಪಾಟೀಲ, ಧುರ್ಯೋದನ ಐಹೊಳೆ, ಜನಾರ್ದನ ರೆಡ್ಡಿ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ವೈ. ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಪಕ್ಷದ ಮುಖಂಡರಾದ ಡಾ. ಬಸವರಾಜ ಕ್ಯಾವಟರ್, ಶರಣು ತಳ್ಳಿಕೇರಿ, ಕೆ.ಎಸ್. ದಿವಾಕರ, ಚಂದ್ರಶೇಖರ ಹಲಗೇರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.