(ಸಾಂದರ್ಭಿಕ ಚಿತ್ರ)
ಗಂಗಾವತಿ: ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳನ್ನು ಅದೇ ಗ್ರಾಮದ ಹನುಮಂತ, ಸಿದ್ದರಾಮೇಶ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿಗಳಲ್ಲಿ ಹನುಮೇಶ ಎನ್ನುವವನು ಕನಕಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕೊಲೆ ಮಾಡಿರುವುದಾಗಿ ಒಪ್ಪಿ ಶರಣಾಗಿದ್ದಾನೆ. ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ಹನುಮೇಶ ಆರೋಪಿ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಪತಿ ಪತ್ನಿಯನ್ನು ಕಳೆದ ಒಂದು ವರ್ಷದ ಹಿಂದೆ ತವರು ಮನೆಗೆ ಕಳುಹಿಸಿದ್ದ.
ಅನೈತಿಕ ಸಂಬಂಧದ ವಿಚಾರ ಪತಿಗೆ ತಿಳಿದ ಕಾರಣಕ್ಕೆ ಕೊಲೆಯಾದ ನಾಗರಾಜ 1 ವರ್ಷದಿಂದ ಗ್ರಾಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಹಿಂದೆಯಷ್ಟೆ ಊರಿಗೆ ಬಂದಿದ್ದ.
ಗ್ರಾಮಕ್ಕೆ ಬಂದಿರುವ ವಿಷಯ ತಿಳಿಸಿದ ಆರೋಪಿ ಹನುಮೇಶ, ಸಿದ್ದರಾಮೇಶ ದ್ವೇಷದಿಂದ ವೆಂಕಟಗಿರಿ ಹೊರವಲಯದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.