ಹನುಮಸಾಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಹನುಮಸಾಗರ ಗ್ರಾಮದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರವನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ಮಹಿಳೆಯರು ಕಳಸದ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಗ್ರಾಮದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪೂಜೆ ನೆರವೇರಿಸಲಾಯಿತು. ಬಳಿಕ ಭಾವಚಿತ್ರ ಮೆರವಣಿಗೆ ಗೂಳಿಬಸವೇಶ್ವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ಹಳೆ ಬಸ್ ನಿಲ್ದಾಣ, ಬನಶಂಕರಿ ದೇವಸ್ಥಾನ ಮಾರ್ಗಗಳಲ್ಲಿ ಸಾಗಿತು.
ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಮಾಜಿ ಉಪಾಧ್ಯಕ್ಷ ಮಂಜುನಾಥ ಹುಲ್ಲೂರ, ತಾಲ್ಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಬಸವರಾಜ ಹಳ್ಳೂರ, ಪಿಡಿಒ ನಿಂಗಪ್ಪ ಮೂಲಿಮನಿ, ಮಹಾಂತೇಶ ಅಗಸಿಮುಂದಿನ, ಪ್ರಶಾಂತ ಗಡಾದ, ಸೂಚಪ್ಪಾ ದೇವರಮನಿ, ಸಂಗಮೇಶ ಕರಂಡಿ, ಬಸವರಾಜ ಅಕ್ಕಿ, ಮರೇಗೌಡ ಬೋದೂರ, ಹನುಮಂತ ಪೂಜಾರಿ, ನೀಲಪ್ಪ ಕುದರಿ ಸೇರಿ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.