ADVERTISEMENT

ಎಲ್ಲ ಸಮುದಾಯಗಳ ಆಶಾಕಿರಣ: ರವೀಂದ್ರ ಸಜ್ಜನ್ ಅಭಿಮತ

ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 11:46 IST
Last Updated 14 ಏಪ್ರಿಲ್ 2021, 11:46 IST
ಕನಕಗಿರಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು
ಕನಕಗಿರಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು   

ಕನಕಗಿರಿ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಪರಿಶಿಷ್ಟ ಸಮುದಾಯಗಳಿಗೆ ಆಶಾಕಿರಣವಾಗಿರಲಿಲ್ಲ. ಅವರು ಸರ್ವ ಜನಾಂಗದ ನಾಯಕರಾಗಿದ್ದರು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್ ಅಭಿಪ್ರಾಯಪಟ್ಟರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಡವರು, ಹಿಂದುಳಿದವರು, ಪರಿಶಿಷ್ಟರು, ಅಲ್ಪಸಂಖ್ಯಾತರ ಪ್ರಗತಿಗೆ ಅಂಬೇಡ್ಕರ್ ಅವರು ನಡೆಸಿದ ಹೋರಾಟ ಸ್ಮರಣೀಯ. ಸಮಾಜದಲ್ಲಿ ಶೋಷಣೆಗೆ ಒಳಗಾದವರ ಕುರಿತು ಅವರು ಅಪಾರ ಕಾಳಜಿ ಹೊಂದಿದ್ದರು’ ಎಂದು ಹೇಳಿದರು.

ADVERTISEMENT

‘ಧ್ವನಿ ಇಲ್ಲದ ಸಮುದಾಯದವರನ್ನು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದರು’ ಎಂದು ಹೇಳಿದರು.

ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ವಿದ್ಯೆ ಯಾರೂ ಕದಿಯಲಾರದ ಆಸ್ತಿ. ಹಣಕ್ಕಿಂತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು’ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಶರಣಬಸಪ್ಪ ಭತ್ತದ, ರವಿ ಭಜಂತ್ರಿ, ಮಂಜುನಾಥ ಗಡಾದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ ಹಾಗೂ ಮುಖಂಡ ಪಾಮಣ್ಣ ಅರಳಿಗನೂರು ಮಾತನಾಡಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಕನಕಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಪ್ರಧಾನ ಕಾರ್ಯದರ್ಶಿ ವಾಗೀಶ ಹಿರೇಮಠ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹ್ಮದಪಾಷ ಮುಲ್ಲಾರ, ಮಂಜುನಾಥರೆಡ್ಡಿ ಮಾದಿನಾಳ, ಕೆ. ಸುಭಾಸ, ಖಾಜಾಸಾಬ ಗುರಿಕಾರ, ಮುಖ್ಯಾಧಿಕಾರಿ ತಿರುಮಲಮ್ಮ, ದಿಶಾ ಸಮಿತಿ ಸದಸ್ಯ ಹನುಮೇಶ ಯಲಬುರ್ಗಿ, ಪಿಎಸ್ಐಗಳಾದ ತಾರಾಬಾಯಿ, ಕಾಶೀಂಸಾಬ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ ಹಾದಿಮನಿ, ಸದಸ್ಯರಾದ ಕಂಠೆಪ್ಪ ಜವಳಗೇರಾ, ನಾಗೇಶ ಬಡಿಗೇರ, ನಿಂಗಪ್ಪ ಪೂಜಾರ, ಬಿಜೆಪಿ ಮಂಡಲ ಎಸ್ ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಬಸರಿಗಿಡದ, ಮಹಿಳಾ ಮೋರ್ಚಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಜಿಲ್ಲಾ ಉಪಾಧ್ಯಕ್ಷೆ ಅಶ್ವಿನಿ ದೇಸಾಯಿ, ಪ್ರಮುಖರಾದ ಬಸಪ್ಪ ತೆಗ್ಗಿನಮನಿ, ಟಿ.ಜೆ. ಶ್ರೀನಿವಾಸ, ಶರಣಪ್ಪ ಭಾವಿಕಟ್ಟಿ, ಪಂಪಾಪತಿ ಜಾಲಿಹಾಳ ಕಂಠಿ ಮ್ಯಾಗಡೆ, ಕಕಪ್ಪ ಮ್ಯಾಗಡೆ ಹಾಗೂ ತಿಮ್ಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.