ಮುನಿರಾಬಾದ್: ಸಮೀಪದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಶನಿವಾರದಿಂದ ಪ್ರಾರಂಭವಾಗಲಿದೆ.
ಶನಿವಾರ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಳ್ಳಿ ಮಂಟಪದಲ್ಲಿ ದೇವಿಗೆ ಶಾರ್ದೂಲ ವಾಹನ ಅಲಂಕಾರ ಮತ್ತು ಪೂಜೆ ನಡೆಯಲಿದೆ.
ಸಾಂಸ್ಕೃತಿಕ ವೇದಿಕೆಯಲ್ಲಿ ಯಲ್ಲಾಪುರದ ಈಶ್ವರ ದಾಸ ಕೊಪ್ಪೆಸರ ಅವರಿಂದ ‘ಹರಿಕಥಾಮೃತಸಾರ’ ಕಾರ್ಯಕ್ರಮ, ಹೊಸಪೇಟೆಯ ಅಂಜಲಿ ಭರತನಾಟ್ಯ ಕಲಾ ಕೇಂದ್ರದ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮ ನಡೆಯುತ್ತದೆ ಎಂದು ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.