ADVERTISEMENT

ಗಂಗಾವತಿ | ಅಂಜನಾದ್ರಿ ಅಭಿವೃದ್ಧಿ ಹೇಳಿಕೆಗೆ ಸೀಮಿತವಾಗದಿರಲಿ: ಪರಣ್ಣ ಮುನವಳ್ಳಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 6:48 IST
Last Updated 6 ಸೆಪ್ಟೆಂಬರ್ 2025, 6:48 IST
ಪರಣ್ಣ ಮುನವಳ್ಳಿ
ಪರಣ್ಣ ಮುನವಳ್ಳಿ   

ಗಂಗಾವತಿ: ತಾಲ್ಲೂಕಿನ ಅಂಜನಾದ್ರಿ ಅಭಿವೃದ್ಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದು ಸ್ವಾಗತಾರ್ಹ. ಆದರೆ ಅಂಜನಾದ್ರಿ ಅಭಿವೃದ್ಧಿ ಹೇಳಿಕೆಗೆ ಸೀಮಿತವಾಗದಿರಲಿ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.

‘ಹನುಮನ ಜನ್ಮಸ್ಥಳ ಅಂಜನಾದ್ರಿ ಅಭಿವೃದ್ಧಿ ತುರ್ತಾಗಿ ಆಗಬೇಕಿದೆ. ಅಂಜನಾದ್ರಿಗೆ ನಿತ್ಯ ಸಾವಿರಾರು ಜನ ಭಕ್ತರು ಭೇಟಿ ನೀಡುತ್ತಿದ್ದಾರೆ. ಆದರೆ ಇಲ್ಲಿ ಅಗತ್ಯ ಸೌಕರ್ಯಗಳಿಲ್ಲ. ಇದರಿಂದ ಭಕ್ತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಅಂಜನಾದ್ರಿ ಅಭಿವೃದ್ಧಿಗೆ ₹120 ಕೋಟಿ ಅನುದಾನ ನೀಡಲಾಗಿತ್ತು. ಆ ಹಣದಲ್ಲಿಯೇ ಈಗ ಕೆಲ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ’ ಎಂದು ತಿಳಿಸಿದ್ದಾರೆ.

‘ಇಂದಿನ ರಾಜ್ಯ ಸರ್ಕಾರ ಮೊದಲ ಬಜೆಟ್‌ನಲ್ಲಿ ಅಂಜನಾದ್ರಿ ಅಭಿವೃದ್ಧಿಗೆ ₹100 ಕೋಟಿ ಅನುದಾನ ಘೋಷಣೆ ಮಾಡಿ, ಈವರೆಗೆ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಈ ಬಾರಿಯಾದರೂ ಮಂಜೂರಾದ ಕಾಮಗಾರಿಗಳ ಅನುದಾನದಲ್ಲಿ ಅಂಜನಾದ್ರಿಗೆ ಬೇಕಾದ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಕ್ರಮವಹಿಸಬೇಕು. ಜೊತೆಗೆ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.