
ಕೊಪ್ಪಳ: ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಅನಗತ್ಯ ಗೊಂದಲ ಉಂಟು ಮಾಡಲಾಗುತ್ತಿದ್ದು, ಇದಕ್ಕೆ ಗೋವಿಂದಾನಂದ ಸರಸ್ವತಿ ಸ್ವಾಮೀಜಿಯೇ ಕಾರಣರಾಗಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಮಧ್ಯಪ್ರವೇಶಿಸಬೇಕು ಎಂದು ಶಿವರಾಮ ಸೇನೆ ರಾಜ್ಯಾಧ್ಯಕ್ಷ ಸಂಜೀವ ಮರಡಿ ಆಗ್ರಹಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಅಂಜನಾದ್ರಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಆದರೆ ಧಾರ್ಮಿಕ ಕ್ಷೇತ್ರದ ಘನತೆಗೆ ಉಂಟು ಮಾಡುವ ಘಟನೆಗಳು ನಡೆಯುತ್ತಿವೆ. ಹಿಂದೂಗಳಿಗೆ ಅಯೋಧ್ಯೆ ಎಷ್ಟು ಪುಣ್ಯಕ್ಷೇತ್ರವೋ ಹಾಗೂ ಅಂಜನಾದ್ರಿಯೂ ಅಷ್ಟೇ ಪ್ರಮುಖ ತಾಣವಾಗಿದೆ ಎಂದು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಹಿಂದಿನ ನಾಲ್ಕು ದಶಕಗಳಿಂದ ಅಂಜನಾದ್ರಿಯಲ್ಲಿ ವಿದ್ಯಾದಾಸಬಾಬಾ ಸೇವೆ ಸಲ್ಲಿಸುತ್ತಿದ್ದಾರೆ. ಅಂಜನಾದ್ರಿಯ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ನ್ಯಾಯಾಲಯದ ಆದೇಶದಂತೆ ಅವರಿಗೆ ಪೂಜೆಗೆ ಅವಕಾಶ ದೊರೆತಿದೆ. ಆದರೆ, ಗೋವಿಂದಾನಂದ ಸ್ವರಸ್ವತಿ ಅವರು ಇತ್ತೀಚಿನ ದಿನಗಳಲ್ಲಿ ಅಂಜನಾದ್ರಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಭಕ್ತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಹಿಂದಿನ ಬಿಜೆಪಿ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಘೋಷಿಸಿದರೂ ಕೆಲಸಗಳು ಆಗಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.