
ಪ್ರಜಾವಾಣಿ ವಾರ್ತೆ
ಗಂಗಾವತಿ: ಅಂಜನಾದ್ರಿ ಬೆಟ್ಟದ ಗರ್ಭಗುಡಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾ ಹಾಗೂ ಹಂಪಿಯ ಭಗವಾನ್ ವ್ಯಾಸಾಶ್ರಮದ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ನಡುವೆ ವಾಗ್ವಾದ ನಡೆದಿದ್ದು, ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಂಗಳವಾರ ಬೆಳಿಗ್ಗೆ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಅಂಜನಾದ್ರಿ ಬೆಟ್ಟ ಹತ್ತಿ ಹನುಮನ ದರ್ಶನ ಪಡೆದಿದ್ದರು. ಬಳಿಕ ಸ್ವಾಮೀಜಿ ಮತ್ತು ಅರ್ಚಕ ವಿದ್ಯಾದಾಸ ಬಾಬಾ ಅವರ ನಡುವೆ ವಾಗ್ವಾದ ನಡೆದಿದೆ.
ವಾಗ್ವಾದ ಇಬ್ಬರು ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದದ್ದಾರೆ. ಚಕಮಕಿಗೆ ಕಾರಣ ತಿಳಿದುಬಂದಿಲ್ಲ. ಅರ್ಚಕ ವಿದ್ಯಾದಾಸ ಬಾಬಾ ಅವರು ಗೋವಿಂದಾನಂದ ಸ್ವಾಮೀಜಿ ವಿರುದ್ಧ ಆನ್‌ಲೈನ್ ಮೂಲಕ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.