ADVERTISEMENT

ಅಂಜನಾದ್ರಿ: ಡಿ.10 ರವರೆಗೆ ದರ್ಶನ ನಿಷೇಧ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:50 IST
Last Updated 24 ನವೆಂಬರ್ 2020, 16:50 IST
ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಬಳಿ ಇರುವ ಅಂಜನಾದ್ರಿ ದೇಗುಲದ ದೃಶ್ಯ
ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಬಳಿ ಇರುವ ಅಂಜನಾದ್ರಿ ದೇಗುಲದ ದೃಶ್ಯ   

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ತಿಂಗಳಿನಿಂದ ಚಿರತೆ ಹಾಗೂ ಕರಡಿ ಹಾವಳಿ ಹೆಚ್ಚಿದ ಕಾರಣ ಅಂಜನಾದ್ರಿ ಬೆಟ್ಟಕ್ಕೆ ಡಿ.10 ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

‘ಗಂಗಾವತಿ ತಾಲ್ಲೂಕು ವ್ಯಾಪ್ತಿಯ ಬೆಟ್ಟಗುಡ್ಡಗಳು ನೈಸರ್ಗಿಕ ಅರಣ್ಯ ಪ್ರದೇಶಗಳಾಗಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಸಣಾಪುರ ಕೆರೆ, ಪಂಪಾ ಸರೋವರ, ದುರ್ಗಾದೇವಿ ದೇವಸ್ಥಾನ, ತಿರುಮಲಾಪುರ, ಹನುಮನಹಳ್ಳಿ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ಧಾರೆ.

ಕೆಲ ದಿನಗಳಹಿಂದೆ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆಕೊಂದು ಹಾಕಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.