ADVERTISEMENT

ಅಂಜನಾದ್ರಿ: ಹನುಮ ಮಾಲಾ ವಿಸರ್ಜನೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 1:53 IST
Last Updated 11 ಡಿಸೆಂಬರ್ 2021, 1:53 IST
ಅಂಜನಾದ್ರಿ ದೇವಸ್ಥಾನದ ಬೆಟ್ಟ
ಅಂಜನಾದ್ರಿ ದೇವಸ್ಥಾನದ ಬೆಟ್ಟ   

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಡಿ.16 ರಂದು ನಡೆಯಲಿರುವ ಹನುಮ ಮಾಲಾ ವಿಸರ್ಜನೆಗೆ ಜಿಲ್ಲಾ ಆಡಳಿತ ನಿರ್ಬಂಧ ವಿಧಿಸಿದೆ.

‘ಡಿ.16 ರಂದು ನಡೆಯಲಿರುವ ಹನುಮ ಮಾಲಾ ವಿಸರ್ಜನೆಯಲ್ಲಿ 40 ಸಾವಿರಕ್ಕೂ ಹೆಚ್ಚು ಭಕ್ತರು ಸೇರಲಿದ್ದಾರೆ. ಮಾಲಾಧಾರಿಗಳಿಗೆ ಅಂಜನಾದ್ರಿ ಬೆಟ್ಟದಲ್ಲಿ ಅರ್ಚಕರ ವ್ಯವಸ್ಥೆ, ಕುಡಿಯುವ ನೀರು, ಪ್ರಸಾದ, ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು‘ ಎಂದುವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ಮನವಿ ಮಾಡಿದ್ದರು.

ಕೊಪ್ಪಳ ಜಿಲ್ಲೆಯ ಹನುಮ‌ ಭಕ್ತರು ಡಿ.16 (ಗುರುವಾರ) ರಂದು ನಡೆಯಲಿರುವ ಹನುಮ ಮಾಲಾ ವಿಸರ್ಜನೆಯನ್ನು ಸಾಂಕೇತಿಕವಾಗಿ ಮನೆಯಲ್ಲಿ ಆಚರಣೆ ಮಾಡಬೇಕು. ಹಾಗೇಯೆ ಬೇರೆ, ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಹನುಮ ಮಾಲಾ ವಿಸರ್ಜನೆಗೆ ಆಗಮಿಸುವ ಭಕ್ತರಿಗೆ ಪ್ರವೇಶ ನೀಡದಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿವಿಕಾಸ್‌ ಕಿಶೋರ್‌ ಸುರಳ್ಕರ್‌ ಆದೇಶ ಹೊರಡಿಸಿದ್ದಾರೆ.

ADVERTISEMENT

ಕೋವಿಡ್‌ ನಿಯಂತ್ರಣದ ಭಾಗವಾಗಿ ಈ ಕ್ರಮ ಕೈಗೊಂಡಿದ್ದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.