
ಮುನಿರಾಬಾದ್: ಸಮೀಪದ ಹಿಟ್ನಾಳ ಗ್ರಾಮದ ಚಿಲ್ಮರ ತಾಯಮ್ಮ ದೇವಿಯ ಕಾರ್ತಿಕೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಶನಿವಾರ ಮತ್ತು ಭಾನುವಾರ ನಡೆಯಲಿದೆ.
ಶನಿವಾರ ಬೆಳಿಗ್ಗೆ ತಾಯಮ್ಮ ದೇವಿಗೆ ಅಭಿಷೇಕ, ವಿಶೇಷ ಪೂಜೆ, ಪುಷ್ಪಾಲಂಕಾರ ನಡೆಯಲಿದೆ. ಭತ್ತರಿಂದ ದೀರ್ಘದಂಡ ನಮಸ್ಕಾರ ನಂತರ ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಭಾವಚಿತ್ರದ ಮೆರವಣಿಗೆ, ಮಧ್ಯಾಹ್ನ ಅನ್ನಸಂಪರ್ಪಣೆ ನಡೆಯಲಿದೆ.
ಭಾನುವಾರ ಬೆಳಿಗ್ಗೆ ವಿಶೇಷ ಪೂಜೆ, ಮಹಾಮಂಗಳಾರತಿ, ಭಕ್ತರಿಂದ ದೇವಿಯ ದರ್ಶನ ನಡೆಯಲಿದೆ. ಸಂಜೆ 4 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಮದ್ದು ಸುಡುವ ಕಾರ್ಯಕ್ರಮ ನಡೆಯಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ‘ತಾಯಿಯ ಋಣ ಮಣ್ಣಿನ ಗುಣ’ ಎಂಬ ಹಾಸ್ಯ ನಾಟಕದ ಉಚಿತ ಪ್ರದರ್ಶನ ಇರುತ್ತದೆ.
ಭಾನುವಾರ ಸಂಜೆಯಿಂದ ವೈಭವ ಮೆಲೋಡಿಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.