ಸಾವು (ಪ್ರಾತಿನಿಧಿಕ ಚಿತ್ರ)
ಕೊಪ್ಪಳ: ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಕುಕನೂರು ತಾಲ್ಲೂಕಿನ ಆಡೂರು ಗ್ರಾಮದ ರೇಣುಕಾ ಹಿರೇಮನಿ (21) ಮಂಗಳವಾರ ಮೃತಪಟ್ಟಿದ್ದಾರೆ. ಒಂದೇ ವಾರದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಮೃತಪಟ್ಟ ಎರಡನೇ ಪ್ರಕರಣ ಇದಾಗಿದೆ.
ಹೊಟ್ಟೆಯಲ್ಲಿದ್ದ ಮಗು ಹೊರಳದ ಕಾರಣ ಆತಂಕಗೊಂಡ ರೇಣುಕಾ ಮೊದಲು ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ತೆರಳಿ ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಬಂದು, ಅಲ್ಲಿಯೇ ಮೃತಪಟ್ಟಿದ್ದಾರೆ.
‘ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿತ್ತು. ಸಿಸೇರಿಯನ್ ಮಾಡಿ ಕೂಸನ್ನು ವೈದ್ಯರು ಹೊರ ತೆಗೆದಿದ್ದಾರೆ. ಈ ವೇಳೆ ಮಹಿಳೆಗೆ ಹೃದಯ ಸ್ತಂಭನ ಬನವಾಗಿದೆ. ಅದಕ್ಕೆ ಚಿಕಿತ್ಸೆ ನೀಡಿ ವೆಂಟಿಲೇಟರ್‌ನಲ್ಲಿಟ್ಟಿದ್ದರು. ಕೆಲವು ಗಂಟೆಗಳ ಬಳಿಕ ಎರಡನೇ ಬಾರಿ ಹೃದಯ ಸ್ತಂಭನ ಸಂಭವಿಸಿ ಮೃತಪಟ್ಟಿದ್ದಾರೆ’ ಎಂದು ಕೊಪ್ಪಳ ಡಿಎಚ್‌ಒ ಡಾ. ಲಿಂಗರಾಜು ಟಿ. ಪ್ರತಿಕ್ರಿಯಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಂಡೂರಿನ ಐಶ್ವರ್ಯಾ ಎಂಬುವವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.