ಪ್ರಾತಿನಿಧಿಕ ಚಿತ್ರ
ಕೊಪ್ಪಳ: ವ್ಯಾಟ್ಸ್ ಆ್ಯಪ್‌ನಲ್ಲಿ ಬಂದ ಆರ್‌ಟಿಒ ಇ ಚಲನ್–1 ಹೆಸರಿನ ಎಪಿಕೆ ಫೈಲ್ ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡಿದ್ದನ್ನೇ ಬಂಡವಾಳ ಮಾಡಿಕೊಂಡ ವಂಚಕರು ತಾಲ್ಲೂಕಿನ ಕರ್ಕಿಹಳ್ಳಿ ಗ್ರಾಮದ ಉದ್ಯಮಿ ಅಮರೇಶ ಹೂಗಾರ ಅವರಿಗೆ ₹7.41 ಲಕ್ಷ ವಂಚಿಸಿದ್ದಾರೆ.
ಅಮರೇಶ್ ತಮ್ಮ ಮೊಬೈಲ್‌ಗೆ ಬಂದ ಎಪಿಕೆ ಫೈಲ್ ಇನ್‌ಸ್ಟಾಲ್ ಮಾಡಿಕೊಳ್ಳುತ್ತಿದ್ದಂತೆಯೇ ಅವರ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಲು ಆರಂಭವಾಗಲಿದೆ. ವಂಚಕರು ಮೊದಲು ₹50 ಸಾವಿರ ಎಗರಿಸಿದ್ದಾರೆ. ಹಂತಹಂತವಾಗಿ ಹಣವನ್ನು ವಂಚಕರು ತಮ್ಮ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ವಂಚಕರನ್ನು ಪತ್ತೆ ಹೆಚ್ಚಿ ಕ್ರಮ ಕೈಗೊಳ್ಳುವಂತೆ ಅವರು ಇಲ್ಲಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.