ADVERTISEMENT

ಕೊಪ್ಪಳ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಆಗ್ರಹಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 6:40 IST
Last Updated 9 ಜುಲೈ 2025, 6:40 IST
ಕೊಪ್ಫಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು
ಕೊಪ್ಫಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು   

ಕೊಪ್ಪಳ: ರಾಜ್ಯದ ಶಾಲಾ ಮಕ್ಕಳಿಗೆ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್‌. ಶಿವರಾಮೇಗೌಡ ಬಣ) ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಭಾಷಾ ಸಮತೋಲನಕ್ಕಾಗಿ ಮೊದಲು ಕನ್ನಡವನ್ನು ಉಳಿಸಿಕೊಂಡು ಜೊತೆಗೆ ಇಂಗ್ಲಿಷ್‌ನಂಥ ಜಾಗತಿಕ ಭಾಷೆಯಲ್ಲಿ ಮಕ್ಕಳಿಗೆ ಸಾಧನೆಗೆ ಅವಕಾಶ ಕೊಡುವುದು, ಸ್ಥಳೀಯ ಹಾಗೂ ಜಾಗತಿಕ ಜ್ಞಾನ ಒದಗಿಸಲು, ತಾತ್ವಿಕ ಪ್ರೌಢಿಮೆ ಬೆಳಸಲು ದ್ವಿಭಾಷಾ ನೀತಿ ಅಗತ್ಯವಾಗಿದೆ ಎಂದು ಪದಾಧಿಕಾರಿಗಳು ಹೇಳಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೊನಕೇರಿ, ಜಿಲ್ಲಾ ಉಪಾಧ್ಯಕ್ಷ ಗವಿಸಿದ್ದಪ್ಪ ಹೊಂಡಿ, ಪ್ರಮುಖರಾದ ಹುಸೇನಬಾಷಾ ಗುನ್ನಳ್ಳಿ, ಮೌನೇಶ್ ಹಡಪದ, ಶಂಕರ ಮೇಟಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.