ADVERTISEMENT

ಕೊಪ್ಪಳ | ಬೋಧಕ ಆಸ್ಪತ್ರೆಯ ಉದ್ಘಾಟನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 14:03 IST
Last Updated 23 ಜೂನ್ 2025, 14:03 IST

ಕೊಪ್ಪಳ: ಜಿಲ್ಲಾಕೇಂದ್ರದಲ್ಲಿ ನಿರ್ಮಿಸಲಾಗಿರುವ 450 ಹಾಸಿಗೆಗಳ ನೂತನ ಬೋಧಕ ಆಸ್ಪತ್ರೆಯ ಕಟ್ಟಡವನ್ನು ಆದಷ್ಟು ಬೇಗನೆ ಉದ್ಘಾಟಿಸಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮತ್ತು ಜಿಲ್ಲಾ ಆಸ್ಪತ್ರೆಗೆ ತಲಾ ಒಂದು ಎಂಆರ್‌ಐ ಯಂತ್ರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವನ್ನು ಶನಿವಾರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರಿಗೆ ಸಲ್ಲಿಸಲಾಯಿತು. 

ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ ಶೀಲವಂತರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಗಾಳೆಪ್ಪ ಮುಂಗೋಲಿ ಸೇರಿದಂತೆ ಅನೇಕರು ಮನವಿ ಸಲ್ಲಿಸಿದರು.

ಸೌಲಭ್ಯ ಕಲ್ಪಿಸಿದರೆ ಅನೇಕ ಬಡವರಿಗೆ ಅನುಕೂಲವಾಗುತ್ತದೆ. ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.