
ಪ್ರಜಾವಾಣಿ ವಾರ್ತೆತಾವರಗೇರಾ: ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಾಗಮ್ಮ ಆದಪ್ಪ ನಾಲತವಾಡ ಟ್ರಸ್ಟ್ ಆಶ್ರಯದಡಿ ನಡೆಯುತ್ತಿರುವ ವಸತಿ ನಿಲಯಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಪ್ರಸ್ತುತ 5 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರು ಸೂಕ್ತ ದಾಖಲೆಗಳೊಂದಿಗೆ ಉಚಿತ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಬಹುದು.
ಸರ್ಕಾರದ ನಿಯಮಾನುಸಾರ ಮತ್ತು ಮೀಸಲಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು. ಪ್ರವೇಶ ಬಯಸುವ ಆಸಕ್ತ ವಿದ್ಯಾರ್ಥಿನಿಯರು ಮೇ 28ರೊಳಗೆ ಅರ್ಜಿ ಸಲ್ಲಿಸಬಹುದು. ತಾವರಗೇರಾ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳ ಬಡ ವಿದ್ಯಾರ್ಥಿನಿಯರು ಇದರ ಸದುಪಯೋಗವನ್ನು ಪಡೆಯಬೇಕು.ಹೆಚ್ಚಿನ ಮಾಹಿತಿಗಾಗಿ 9739016936 ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.