ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಿಂದ 13 ದಿನಗಳ ಕೃಷಿ ಉದ್ಯಮಿ, 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿ ಮತ್ತು 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿ ನೀಡಲಾಗುತ್ತಿದ್ದು ಮೇ 24ರಂದು ಸಂದರ್ಶನ ನಡೆಯಲಿದೆ. 26ರಿಂದ ತರಬೇತಿ ಪ್ರಾರಂಭವಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಉಚಿತವಾಗಿ ಇರಲಿದೆ.
ಅರ್ಜಿದಾರರು 18ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08539 231038, ಮೊ: 9483618178 ಸಂಪರ್ಕಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.