ADVERTISEMENT

ಕೃಷಿ ಕಾಯ್ದೆ ಹಿಂಪಡೆಯಿರಿ

ಕುಷ್ಟಗಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 13:39 IST
Last Updated 7 ಜನವರಿ 2021, 13:39 IST
ಕುಷ್ಟಗಿಯಲ್ಲಿ ಆಶಾ ಕಾರ್ಯಕರ್ತೆಯರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು
ಕುಷ್ಟಗಿಯಲ್ಲಿ ಆಶಾ ಕಾರ್ಯಕರ್ತೆಯರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು   

ಕುಷ್ಟಗಿ: ನೂತನ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಅವುಗಳ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಬೇಕು. ಅವುಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು.

ಎಐಟಿಯುಸಿ ನೇತೃತ್ವದಲ್ಲಿ ಬಸವೇಶ್ವರ ದೇವಸ್ಥಾನದ ಬಳಿ ನಡೆದ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರು ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಮಾತನಾಡಿ,‘ಕೇಂದ್ರ ಸರ್ಕಾರದ ಮೂರು ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಭಾಗದಲ್ಲಿ ಕೊರೆಯುವ ಚಳಿಯ ನಡುವೆಯೂ ಕಳೆದ ಆರೇಳು ವಾರಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದನ್ನು ಬೆಂಬಲಿಸಬೇಕಿದೆ ಎಂದು ಹೇಳಿದರು.

ADVERTISEMENT

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ, ತಾಲ್ಲೂಕು ಘಟಕದ ಅಧ್ಯಕ್ಷೆ ಗಾಯತ್ರಿ, ರೇಣುಕಾ, ಸಾವಿತ್ರಿ, ಸರಸ್ವತಿ ಹಾಗೂ ಶೀಲಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.