ಗಂಗಾವತಿ: ನಗರದ ಆನೆಗೊಂದಿ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು, ಆರೋಪಿ ಕನಕಗಿರಿ ತಾಲ್ಲೂಕಿನ ಬಸರಿಹಾಳ ಗ್ರಾಮದ ಬಾಲಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಆಶಾ ಕಾರ್ಯಕರ್ತೆ ಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಹೆರಿಗೆ ವಿಳಂಬವಾದ್ದರಿಂದ ಶುಕ್ರವಾರ ರಾತ್ರಿ ಆಸ್ಪತ್ರೆಯಲ್ಲೇ ಉಳಿದಿದ್ದರು. ಈ ವೇಳೆ ಗರ್ಭಿಣಿಯ ಸಂಬಂಧಿಕ ಬಾಲಪ್ಪ ಅತ್ಯಾಚಾರಕ್ಕೆ ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.