ADVERTISEMENT

 ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 13:21 IST
Last Updated 3 ಜನವರಿ 2021, 13:21 IST
ಕನಕಗಿರಿ ತಾಲ್ಲೂಕಿನ ಶಿಕ್ಷಕಿಯರಿಗೆ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಯಿತು
ಕನಕಗಿರಿ ತಾಲ್ಲೂಕಿನ ಶಿಕ್ಷಕಿಯರಿಗೆ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಯಿತು   

ಕನಕಗಿರಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ತಾಲ್ಲೂಕಿನ ಮೂವರು ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕೊಪ್ಪಳದ ವಾಲ್ಮೀಕಿ ಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗರತ್ನ ಪ್ರವೀಣಕುಮಾರ, ಸಮೀಪದ ನವಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕವಿತಾ ಸುರೇಶ ಮತ್ತು ಕನಕಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಯಶೋಧ ಅವರಿಗೆ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸನಗೌಡ, ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ, ನಿರ್ದೇಶಕ ಬಾಳಪ್ಪ ಕಾಳೆ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುಳಾ ಶ್ಯಾವಿ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಾಣೇಶ ಪೂಜಾರ (ಕೊಪ್ಪಳ), ಶಂಶಾದ ಬೇಗಂ (ಕನಕಗಿರಿ), ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಕಣ್ಣವರ್, ನಿರ್ದೇಶಕರಾದ ತಿಪ್ಪೇಶ ಹಾಗೂ ಮಂಜುನಾಥ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.