
ಪ್ರಜಾವಾಣಿ ವಾರ್ತೆ
ಕೊಪ್ಪಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮಧು ಶಿವಕುಮಾರ್ ಪಾವಲಿಶೆಟ್ಟರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.