ADVERTISEMENT

‘ಜಾಗೃತರಾಗಿ ಸೋಂಕು ನಿಯಂತ್ರಿಸಿ’

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 4:52 IST
Last Updated 15 ಜೂನ್ 2021, 4:52 IST
ಹನುಮಸಾಗರ ಸಮೀಪದ ಹಾಬಲಕಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ ಕೋವಿಡ್ ಜಾಗೃತಿ ಮೂಡಿಸಲಾಯಿತು
ಹನುಮಸಾಗರ ಸಮೀಪದ ಹಾಬಲಕಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ ಕೋವಿಡ್ ಜಾಗೃತಿ ಮೂಡಿಸಲಾಯಿತು   

ಹನುಮಸಾಗರ: ‘ಮಾರ್ಗಸೂಚಿ ಪಾಲಿಸುವುದರಿಂದ ಕೊರೊನಾ ಸೋಂಕು ದೂರ ಮಾಡಬಹುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತರಾಯ ಯಂಕಂಚಿ ಹೇಳಿದರು.

ಹಾಬಲಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಬಲಕಟ್ಟಿ, ಮಾಸ್ತಿಕಟ್ಟಿ, ಗಡಚಿಂತಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಕೋವಿಡ್ ಜಾಗೃತಿ, ಮಾಸ್ಕ್‌ ವಿತರಣೆ ಹಾಗೂ ಗ್ರಾಮೀಣ ನೀರು ಸರಬರಾಜು ಯೋಜನೆಯ ಪೈಪ್‍ಲೈನ್ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದಕ್ಕಾಗಿ ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಉಪ ವಿಭಾಗದಿಂದ ಪೈಪ್‍ಲೈನ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಕೆಲ ದಿನಗಳಲ್ಲಿ ನೀರು ಹರಿಯಲಿದೆ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತೆವ್ವ ಕಿಟಗನ್ನನವರ, ಉಪಾಧ್ಯಕ್ಷ ಪರಶುರಾಮ, ಉಮೇಶ ಹಾಗೂ ಪಿಡಿಒ ದೇವೇಂದ್ರಪ್ಪ ಕಮತರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.