ADVERTISEMENT

ಮಕ್ಕಳ ಭವಿಷ್ಯ ರೂಪಿಸುವ ಅರಿವು ಕೇಂದ್ರಗಳು: ತಾ.ಪಂ ಸಹಾಯಕ ನಿರ್ದೇಶಕ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 7:09 IST
Last Updated 21 ಸೆಪ್ಟೆಂಬರ್ 2025, 7:09 IST
ಯಲಬುರ್ಗಾ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್‍ಪಾಟೀಲ ಮಾತನಾಡಿದರು 
ಯಲಬುರ್ಗಾ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್‍ಪಾಟೀಲ ಮಾತನಾಡಿದರು    

ಯಲಬುರ್ಗಾ: ‘ಗ್ರಾಮೀಣ ಪ್ರದೇಶದ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರಗಳನ್ನಾಗಿ ಮಾಡುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ದೊಡ್ಡದಿದೆ. ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಬೇಕು’ ಎಂದು ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್‍ಪಾಟೀಲ ಹೇಳಿದರು.

ತಾ.ಪಂ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದರ್ಶಿನಿ ಕಾರ್ಯಕ್ರಮದ ಅಡಿಯಲ್ಲಿ ಪೂರೈಕೆಯಾಗುವ ಸಹಾಯಕ ಸಾಧನೆಗಳ ಬಳಕೆ ಹಾಗೂ ಅಭಿವೃದ್ಧಿಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಂಗವಿಕಲರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಸೌಲಭ್ಯಗಳು ದೊರೆಯಲಿದ್ದು, ಅವುಗಳು ಸರಿಯಾಗಿ ತಲುಪುವ ಕೆಲಸ ಆಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಸಹಾಯಕ ನಿರ್ದೇಶಕ ಫಕಿರಪ್ಪ ಕಟ್ಟಿಮನಿ ಮಾತನಾಡಿ, ‘ಪಿಡಿಒಗಳು ಹಾಗೂ ಸಂಬಂಧಪಟ್ಟವರು ಕಾರ್ಯಪ್ರವೃತರಾಗಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಬೇವೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂದಮ್ಮ ಬಳಿಗಾರ, ಪಿಡಿಒ ರೇಣುಕಾ ಠಂಕದ, ಎಂಆರ್‌ಡಬ್ಲೂ ತಾಲ್ಲೂಕು ಸಂಯೋಜಕರಾದ ಶಶಿಕಲಾ, ಅರಿವು ಕೇಂದ್ರದ ಸಂಪನ್ಮೂಲ ವ್ಯಕ್ತಿ ರಂಗಪ್ಪ ನಾಯಕ, ತರಬೇತುದಾರ ಭೀಮಪ್ಪ ಹವಳಿ, ವಿಷಯ ನಿರ್ವಾಹಕ ಬಸವರಾಜ ಮಾಲಿಪಾಟೀಲ, ನವೀನ್ ಕರ್ಜೆ ಸೇರಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.