ADVERTISEMENT

ಯಲಬುರ್ಗಾ: ಜಾಗೃತಿ ಜಾಥಾಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:43 IST
Last Updated 31 ಮೇ 2025, 14:43 IST
ಯಲಬುರ್ಗಾ ಪಟ್ಟಣದಲ್ಲಿ ಆರೋಗ್ಯ ಇಲಾಖೆ ಮತ್ತು ವಕೀಲರ ಸಂಘ, ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಯಲಬುರ್ಗಾ ಪಟ್ಟಣದಲ್ಲಿ ಆರೋಗ್ಯ ಇಲಾಖೆ ಮತ್ತು ವಕೀಲರ ಸಂಘ, ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು   

ಯಲಬುರ್ಗಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ವಕೀಲರ ಸಂಘ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ನಗರದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು.

ತಾಲ್ಲೂಕು ವೈದ್ಯಾಧಿಕಾರಿ ಡಾ. ನೇತ್ರಾವತಿ ಹಿರೇಮಠ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ವಿವಿಧ ಕಾಯಿಲೆಗಳಿಗೆ ಕಾರಣವಾಗುವ ತಂಬಾಕು ಸೇವನೆಯನ್ನು ಸಂಪೂಣ್ಯವಾಗಿ ತ್ಯಜಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಹೆಚ್ಚುವರಿ ಸರ್ಕಾರಿ ವಕೀಲ ಎಂ.ಎಸ್. ಪಾಟೀಲ ಮಾತನಾಡಿ, ಸಿಗರೇಟ್‌ ಹಾಗೂ ಇನ್ನಿತರ ಉತ್ಪನ್ನಗಳ ಸೇವನೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದರಿಂದ ನಿಷೇಧಿಸಲಾಗಿದೆ ಎಂದರು.

ADVERTISEMENT

ಆಪ್ತ ಸಮಾಲೋಚಕ ಶರಣಪ್ಪ ಉಪ್ಪಾರ ನಿರೂಪಿಸಿದರು. ವೈದ್ಯಾಧಿಕಾರಿಗಳಾದ ಡಾ. ಮಾರುತಿ ಎಂ, ಡಾ, ಶೇಖರ ಭಜಂತ್ರಿ, ವಕೀಲರ ಸಂಘದ ಕಾರ್ಯದರ್ಶಿ ಮಹಾಂತೇಶ, ವಕೀಲರಾದ ರವಿ ಹುಣಸಿಮರದ, ಎಂ.ಎಸ್. ನಾಯ್ಕರ್, ಜಿ.ಎಸ್. ಮಾನಶೆಟ್ಟಿ, ಕೆ.ಆರ್. ಬೆಟಗೇರಿ ಸೇರಿ ಅನೇಕರು ಇದ್ದರು. ಪಟ್ಟಣದ ವಿವಿಧ ಬೀದಿಗಳಲ್ಲಿ ಗವಿಸಿದ್ದೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಜಾಥಾದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.