ADVERTISEMENT

ಕೊಪ್ಪಳದಲ್ಲಿ ಬಲ್ಡೋಟಾ ಉಕ್ಕು ಕಾರ್ಖಾನೆ

ಕೊಪ್ಪಳ ಜಿಲ್ಲೆಯಲ್ಲಿ ಬಲ್ದೋಟಾ ಸಮೂಹ ಸಂಸ್ಥೆ ₹54 ಸಾವಿರ ಕೋಟಿ ವೆಚ್ಚದಲ್ಲಿ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇ೦ಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆ ಸ್ಥಾಪನೆ ಮುಂದಾಗಿದೆ.

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2025, 15:55 IST
Last Updated 10 ಫೆಬ್ರುವರಿ 2025, 15:55 IST
<div class="paragraphs"><p>ರಾಹುಲ್‌ ಕುಮಾರ್‌ ಬಲ್ದೋಟಾ</p></div>

ರಾಹುಲ್‌ ಕುಮಾರ್‌ ಬಲ್ದೋಟಾ

   

ಬೆಂಗಳೂರು: ಕೊಪ್ಪಳ ಜಿಲ್ಲೆಯಲ್ಲಿ  ಬಲ್ದೋಟಾ ಸಮೂಹ ಸಂಸ್ಥೆ ₹54 ಸಾವಿರ ಕೋಟಿ ವೆಚ್ಚದಲ್ಲಿ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇ೦ಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆ ಸ್ಥಾಪನೆ ಮುಂದಾಗಿದೆ.

ಅರಮನೆ ಮೈದಾನದಲ್ಲಿ ನಡೆಯುವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬಲ್ದೋಟಾ ಸಮೂಹ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಲಿದೆ ಎಂದು ಬಲ್ದೋಟಾ ಸಮೂಹ ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಕುಮಾರ್‌ ಬಲ್ದೋಟಾ ಹೇಳಿದ್ದಾರೆ.

ADVERTISEMENT

‘ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌)’ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿದ್ದು, ಇದರಿಂದ ಕರ್ನಾಟಕದಲ್ಲಿ ಉಕ್ಕು ಉತ್ಪಾದನೆ ಹೆಚ್ಚಾಗಲಿದೆ ಮತ್ತು ಉದ್ಯೋಗ ಸೃಷ್ಟಿಯೂ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.