ADVERTISEMENT

ಕನಕಾಚಲಪತಿ ದೇವಸ್ಥಾನಕ್ಕೆ ಭಕ್ತರ ನಿಷೇಧ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 5:44 IST
Last Updated 4 ಆಗಸ್ಟ್ 2021, 5:44 IST

ಕೊಪ್ಪಳ: ಕೋವಿಡ್-19 ಸೋಂಕು ತಡೆಯಲು ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಕನಕಾಚಲಪತಿ ದೇವಸ್ಥಾನಕ್ಕೆ ಆ.3 ರಿಂದ ಆ.18 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಿ, ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಆದೇಶ ಹೊರಡಿಸಿದ್ದಾರೆ.

ಆ.3 ರಿಂದ 18ರ ರಾತ್ರಿ 12 ಗಂಟೆಯವರೆಗೆ 15 ದಿನಗಳ ಕಾಲ ಕನಕಾಚಲಪತಿ ದೇವಸ್ಥಾನದ ಸುತ್ತ-ಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ-ವಿಧಾನಗಳನ್ನು ಎಲ್ಲ ಮುಂಜಾಗ್ರತಾ ಕ್ರಮವಹಿಸಿ ನಡೆಸಲು ವಿನಾಯಿತಿ ನೀಡಲಾಗಿದೆ.

ADVERTISEMENT

ಈ ಆದೇಶವನ್ನು ಕನಕಾಚಲಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಉಪಾಧೀಕ್ಷಕರು (ಡಿವೈಎಸ್‌ಪಿ) ಗಂಗಾವತಿ, ಕನಕಗಿರಿ ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.