ಕೊಪ್ಪಳ: ‘ರಾಜ್ಯದಲ್ಲಿ ಸಿ.ಎಂ ಆಗುವ ಆಕಾಂಕ್ಷಿಗಳ ಪಟ್ಟಿಯಲ್ಲಿ ನಾನೂ ಇದ್ದೇನೆ. ನಾನೇಕೆ ಸಿ.ಎಂ. ಆಗಬಾರದು’ ಎಂದು ಶಾಸಕ ಬಸವರಾಜ ರಾಯರಡ್ಡಿ ಭಾನುವಾರ ಇಲ್ಲಿ ಪ್ರಶ್ನಿಸಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಅವರು ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಸದ್ಯಕ್ಕೆ ಆ ಕುರ್ಚಿ ಖಾಲಿಯಿಲ್ಲ. ಡಿ.ಕೆ. ಶಿವಕುಮಾರ್ ಸಿ.ಎಂ. ಆಗಬೇಕು ಎಂದು ಕೆಲವು ಶಾಸಕರು ಹೇಳಿರುವುದರಲ್ಲಿ ತಪ್ಪೇನಿಲ್ಲ‘ ಎಂದರು.
‘ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಿ.ಎಂ. ಸ್ಥಾನ ಕೊಟ್ಟರೆ ಸ್ವಾಗತ. ಆದರೆ ಅವರು ಪ್ರಧಾನಿಯಾಗಬೇಕು ಎನ್ನುವುದು ನನ್ನ ಆಸೆ. ನವೆಂಬರ್ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.