ADVERTISEMENT

ಕುಕನೂರು | ‘ನಾನು ಕುಟುಂಬ ರಾಜಕಾರಣ ಮಾಡುವುದಿಲ್ಲ’

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 6:09 IST
Last Updated 15 ಜನವರಿ 2026, 6:09 IST
ಕುಕನೂರು ತಾಲ್ಲೂಕಿನ ಮಂಡಲಗಿರಿ ಗ್ರಾಮದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಗದಗಿನ ತೋಂಟದ ಸಿದ್ಧರಾಮ ಸ್ವಾಮೀಜಿ  ಭೂಮಿಪೂಜೆ ನೆರವೇರಿಸಿದರು
ಕುಕನೂರು ತಾಲ್ಲೂಕಿನ ಮಂಡಲಗಿರಿ ಗ್ರಾಮದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಗದಗಿನ ತೋಂಟದ ಸಿದ್ಧರಾಮ ಸ್ವಾಮೀಜಿ  ಭೂಮಿಪೂಜೆ ನೆರವೇರಿಸಿದರು   

ಕುಕನೂರು: ‘ಕ್ಷೇತ್ರ ಬಿಟ್ಟು ವಲಸೆ ಹೋಗಲು ನಾನೇನು ಅಭಿವೃದ್ಧಿ ಮಾಡಿಲ್ಲವೇ. ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರವೆಂದರೇ ನನ್ನ ಯಲಬುರ್ಗಾ ಕ್ಷೇತ್ರ’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲ್ಲೂಕಿನ ಮಂಡಲಗಿರಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಒಂದು ವರ್ಷದ ಅವಧಿಯಲ್ಲಿ 224 ಕ್ಷೇತ್ರಗಳಲ್ಲಿಯೇ ಅತಿ ಹೆಚ್ಚು ಅನುದಾನವನ್ನು ನನ್ನ ಕ್ಷೇತ್ರಕ್ಕೆ ತಂದಿದ್ದೇನೆ. ನಾನು ಮಂತ್ರಿ ಆಗದಿದ್ದರೂ ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಅದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದರು.

ADVERTISEMENT

ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರು ಅದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅದರಿಂದ ಅವರ ಜೀವನ ಮಟ್ಟ ಸುಧಾರಿಸುತ್ತಿದೆ ಎಂದರು.

ಶಾಸಕರಾದ ರಾಯರಡ್ಡಿ ಅವರು ಜಿಲ್ಲೆಗೆ ಕ್ಯಾನ್ಸರ್ ಹಾಗೂ ಹೃದಯ ಆಸ್ಪತ್ರೆಗಳನ್ನ ಪ್ರಾರಂಭ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಗದಗಿನ ತೋಂಟದ ಸಿದ್ಧರಾಮ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಮ್ಮ ಸಿದ್ದನಗೌಡ, ರತ್ನಮ್ಮ ಭಜಂತ್ರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ್ ಬಿರಾದಾರ್, ಯಂಕಣ್ಣ ಯರಾಶಿ, ಹನುಮಂತ ಗೌಡ ಚಂಡೂರ್, ಸಂಗಮೇಶ್ ಗುತ್ತಿ ಇದ್ದರು.