ADVERTISEMENT

ಗಂಗಾ ಕಲ್ಯಾಣದಿಂದ ಅನುಕೂಲ: ಹಿಟ್ನಾಳ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:13 IST
Last Updated 25 ಜನವರಿ 2023, 5:13 IST
ಕೊಪ್ಪಳ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಗಂಗಾಕಲ್ಯಾಣ ಯೋಜನೆಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು
ಕೊಪ್ಪಳ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಗಂಗಾಕಲ್ಯಾಣ ಯೋಜನೆಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು   

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ 2019-20ನೇ ಸಾಲಿನ ಹಾಗೂ 2021-22ನೇ ಸಾಲಿನ ಗಂಗಾಕಲ್ಯಾಣ ಯೋಜನೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿ ‘ರೈತರಿಗಾಗಿ ಕ್ಷೇತ್ರದಲ್ಲಿ ಅನೇಕ ದೊಡ್ಡ ದೊಡ್ಡ ನೀರಾವರಿ ಯೋಜನೆಗಳನ್ನ ಜಾರಿ ಮಾಡಲಾಗಿದೆ. ₹188 ಕೋಟಿ ವೆಚ್ಚದಲ್ಲಿ ಬಹದ್ದೂರ್ ಬಂಡಿ ನವಲಕಲ್ ಏತ ನೀರಾವರಿ ಯೋಜನೆ, ₹89.80 ಕೋಟಿಯಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ, ₹22ಕೋಟಿ ಮೊತ್ತದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವ್ಯಾಪ್ತಿಯಡಿ ಕವಲೂರು,ಮುರ್ಲಾಪುರ, ಘಟ್ಟರಡ್ಡಿಹಾಳ, ಬೆಳಗಟ್ಟಿ,ಹಟ್ಟಿ, ಅಳವಂಡಿ, ಮೊರನಾಳ, ಬೇಟಗೇರಿ ಹಾಗೂ ಹಿರೇಸಿಂದೋಗಿ ಗ್ರಾಮಗಳಲ್ಲಿ ಕೆರೆ ತುಂಬಿಸುವ ಯೋಜನೆಗೆ ಟೆಂಡರ್‌ ಕರೆಯಲಾಗಿದೆ’ ಎಂದು ತಿಳಿಸಿದರು.

ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಂಗಲಾ ಶಹಾಪುರ, ಭೀಮಣ್ಣ ಮೂಲಿಮನಿ, ಮುದ್ದಪ್ಪ, ನಿಂಗಜ್ಜ ಶಹಾಪುರ, ಬಸವರಾಜ ಮಡ್ಡಿ, ನಾಗರಾಜ ಬಹದ್ದೂರ್ ಬಂಡಿ, ಆನಂದ ಕಿನ್ನಾಳ, ಶಿವಮೂರ್ತಿ ಮೂಲಿಮನಿ, ಚಂದ್ರು ನಾಯಕ್, ಸಂತೋಷ ಕುರಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.