ADVERTISEMENT

ವಿದ್ಯಾರ್ಥಿಗಳೊಂದಿಗೆ ಬಿಇಒ ಸಂವಾದ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 9:09 IST
Last Updated 17 ಏಪ್ರಿಲ್ 2021, 9:09 IST
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಾಯಿತು
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಾಯಿತು   

ಕನಕಗಿರಿ: ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ಅವರು ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಗೆ ಶುಕ್ರವಾರ ಭೇಟಿ ನೀಡಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆ, ರುದ್ರಸ್ವಾಮಿ ಅನುದಾನಿತ ಪ್ರೌಢಶಾಲೆ, ಸಮೀಪದ ಸೋಮಸಾಗರ, ಗೌರಿಪುರ, ಮುಸಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಫಲಿತಾಂಶ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂವಾದ ನಡೆಸಿದರು.

ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ, ಭಯ ಪಡಬೇಡಿ ಎಂದು ಸಲಹೆ ನೀಡಿದರು.

ADVERTISEMENT

ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಫಲಿತಾಂಶ ಸುಧಾರಿಸಲು ಶ್ರಮಿಸಬೇಕೆಂದು ಹೇಳಿದರು.

ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ, ಶಿಕ್ಷಣ ಸಂಯೋಜಕರಾದ ರಾಘವೇಂದ್ರ, ಆನಂದ ನಾಗಮ್ಮನವರ್, ಸಮೂಹ ಸಂಪನ್ಮೂಲ ವ್ಯಕ್ತಿ ವಿನಾಯಕ, ಮುಖ್ಯಶಿಕ್ಷಕರಾದ ಕರೆಗೌಡ, ಚೆನ್ನಯ್ಯ, ಶೇಖಪ್ಪ ಹಾಗೂ ಸುಮಿತ್ರ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.